Connect with us

Featured

ರಮೇಶ್​ ಜಾರಕಿಹೊಳಿ ವಿರುದ್ಧ ಹೆಬ್ಬಾಳ್ಕರ್​ ಕಿಡಿ – ಸಚಿವರು ಮದ, ಗರ್ವ ಬಿಟ್ಟು ಜನರ ಕಡೆ ನೋಡಲಿ

ರೈಸಿಂಗ್​ ಕನ್ನಡ:

ಬೆಳಗಾವಿ:

Advertisement

ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗ್ಗೆ ಗ್ರಾಮೀಣ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡಿನಿಂದ ಎಂದು ಹೇಳಿಕೆ ನೀಡಿದ್ದರು. ಜೊತೆಗೆ, ಬರಲಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ದುಡ್ಡು ಹಂಚುವುದಾಗಿ ಹೇಳಿಕೆ ನೀಡಿದ್ದರು.ನಾವು ನಮ್ಮ ಹರ್ಷಶುಗರ್ಸ್ ಆರಂಭೋತ್ಸವದ ಸಂದರ್ಭದಲ್ಲಿ ಪ್ರಚಾರಕ್ಕಾಗಿ ಅಧಿಕೃತವಾಗಿಯೇ ಕುಕ್ಕರ್ ವಿತರಿಸಿದ್ದೇವೆ. ಇದಕ್ಕೆ ಎಲ್ಲ ಲೆಕ್ಕ ಹಾಗೂ ದಾಖಲೆ ಇದೆ. ಜಿಎಸ್​​ಟಿಯನ್ನು ಕೂಡ ತುಂಬಿದ್ದೇವೆ. ರಮೇಶ್ ಜಾರಕಿಹೊಳಿ ತಮ್ಮ ದುಡ್ಡಿನಿಂದ ಕುಕ್ಕರ್ ವಿತರಿಸಿದ್ದರೆ ಅದಕ್ಕೆ ಸೂಕ್ತ ದಾಖಲೆ ಮತ್ತು ಲೆಕ್ಕ ಕೊಡಲಿ. ಈ ವಿಷಯ ನ್ಯಾಯಾಲಯದಲ್ಲಿದೆ. ಆ ಕುರಿತು ಮಾತನಾಡುವುದು ನ್ಯಾಯಾಂಗ ನಿಂದನೆಯಾಗಲಿದೆ. ನಾನು ಈಗಾಗಲೆ ಈ ಬಗ್ಗೆ ನಮ್ಮ ವಕಿಲರೊಂದಿಗೆ ಮಾತನಾಡಿದ್ದೇನೆ. ರಮೇಶ ಜಾರಕಿಹೊಳಿ ಹೇಳಿಕೆಯ ವೀಡಿಯೋ ಪೂರ್ಣ ಪರಿಶೀಲಿಸಿ, 2-3 ದಿನದಲ್ಲಿ ಬೆಂಗಳೂರಿಗೆ ತೆರಳಿ ಕಾನುನು ಕ್ರಮದ ಕುರಿತು ವಕೀಲರೊಂದಿಗೆ ಚರ್ಚಿಸುತ್ತೇನೆ

  • ಲಕ್ಷ್ಮೀ ಹೆಬ್ಬಾಳ್ಕರ್​​, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ

ನಾವು ಹರ್ಷ ಶುಗರ್ಸ್ ನಿಂದ ಕುಕ್ಕರ್ ವಿತರಿಸಿರುವ ಕುರಿತು ಆದಾಯ ತೆರಿಗೆ ಇಲಾಖೆಗೆ ಲೆಕ್ಕ ನೀಡಿದ್ದೇವೆ. ಇಲಾಖೆ ಅದನ್ನು ಒಪ್ಪಿದೆ. ತಮ್ಮ ದುಡ್ಡು ಎನ್ನುತ್ತಿರುವ ರಮೇಶ ಜಾರಕಿಹೊಳಿ ಈ ಬಗ್ಗೆ ಲೆಕ್ಕ ಕೊಡಲಿ. ಇಲ್ಲವಾದಲ್ಲಿ ನಾನು ಆದಾಯ ತೆರಿಗೆ ಇಲಾಖೆ ಮತ್ತು ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪ್ರಶ್ನಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಮುಂಬರುವ  ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಚುನಾವಣೆಯಲ್ಲಿ ತಾವು ದುಡ್ಡು ಹಂಚುವುದಾಗಿ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಈ ಕುರಿತು ವೀಡಿಯೋ ಸಾಕ್ಷಿಯೊಂದಿಗೆ ಚುನಾವಣೆ ಆಯೋಗಕ್ಕೆ ಪತ್ರ ಬರೆಯುತ್ತೇನೆ. ಈ ಕುರಿತು ಸೂಕ್ತ ಕ್ರಮಕ್ಕೆ ಒತ್ತಾಯಿಸುತ್ತೇನೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.

Advertisement

ರಮೇಶ ಜಾರಕಿಹೊಳಿ ತಾವು ಕ್ಯಾಬಿನೆಟ್ ಸಚಿವರಾದ ತಕ್ಷಣ ಏನು ಬೇಕಾದರೂ ಮಾತನಾಡಬಹುದು ಎಂದು ತಿಳಿದಂತಿದೆ. ಗೋಕಾಕದ ಜನರು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎನ್ನುವ ಕಾರಣಕ್ಕೆ ಇವರಿಗೆ ಮತ ನೀಡಿದ್ದಾರೆಯೇ ವಿನಃ ಇವರ ಮುಖ ನೋಡಿ ಮತ ಹಾಕಿಲ್ಲ. ಇನ್ನಾದರೂ ತಮ್ಮ ಮದ, ಗರ್ವ, ಜಂಬ, ಅಹಂಕಾರಗಳನ್ನು ಬಿಟ್ಟು ಜವಾಬ್ದಾರಿಯಿಂದ ನಡೆದುಕೊಳ್ಳಲಿ ಎಂದು ಲಕ್ಷ್ಮಿ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.

ಮಾಜಿ ಶಾಸಕ ಸಂಜಯ ಪಾಟೀಲ ಅವರಿಗೆ ಅನ್ಯಾಯವಾಗಿದೆ ಎಂದು ಹೋದಲ್ಲಿ ಬಂದಲ್ಲಿ ರಮಶ ಜಾರಕಿಹೊಳಿ ಹೇಳಿಕೆ ನೀಡುತ್ತಿದ್ದಾರೆ. ಹಾಗಾದಲ್ಲಿ  ಸುಮ್ಮನೆ ಜನರ ದುಕ್ಕು ತಪ್ಪಿಸುವ ಕೆಲಸ ಮಾಡುವ ಬದಲು ಸಂಜಯ ಪಾಟೀಲ ಅವರಿಗೆ ಗ್ರಾಮೀಣ ಕ್ಷೇತ್ರದ ಟಿಕೆಟ್ ಕೊಡಿಸಿ, ಗೆಲ್ಲಿಸಿ ತರುತ್ತೇನೆ ಎಂದು ಘೋಷಿಸಲಿ. ಬಿಜೆಪಿ ಕಾರ್ಯಕರ್ತರು ಇವರ ಮಾತಿಗೆ, ಧ್ವಂದ್ವ ನಿಲುವಿಗೆ, ಒಡೆದು ಆಳುವ ನೀತಿಗೆ ಮರುಳಾಗದಿರಲಿ ಎಂದು ಹೆಬ್ಬಾಳಕರ್ ಹೇಳಿದ್ದಾರೆ.

Advertisement

ಹೋದಲ್ಲೆಲ್ಲ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ದುಡ್ಡು ಹಂಚುತ್ತೇನೆ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ದುಡ್ಡು ಹಂಚುತ್ತೇನೆ ಎನ್ನುತ್ತಿರುವ ರಮೇಶ ಜಾರಕಿಹೊಳಿ ಅವರ ಕಬ್ಬಿನ ಬಿಲ್ ಸಿಗದೆ ಬೆಳಗಾವಿ, ಕಿತ್ತೂರು, ಬೈಲಹೊಂಗಲ ತಾಲೂಕಿನ ರೈತರು ಸಾಯುತ್ತಿದ್ದಾರೆ. ಸಂತಿ ಬಸ್ತವಾಡ, ವಿರಕಿನಕೊಪ್ಪಗಳಲ್ಲಿ ಸೇರಿದಂತೆ ಅನೇಕ ಕಡೆ ರೈತರು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ತಲಾ 5 ಲಕ್ಷ ರೂ. ಕೊಡಲಿ. ಮೊದಲು ಬಡ ರೈತರ ಬಾಕಿ ಹಣ ನೀಡಿ ನಂತರ ಚುನಾವಣೆಯಲ್ಲಿ ಹಣ ಹಂಚುವ ಮಾತನಾಡಲಿ. ಜನರು ದಡ್ಡರಲ್ಲ, ಇವರ ಎಲ್ಲ ಹೇಳಿಕೆ, ವರ್ತನೆಗಳನ್ನು ಗಮನಿಸುತ್ತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ