Featured
ಜನರ ಪ್ರಾಣದ ಜೊತೆ ಆಟ ಆಡಬೇಡಿ-ಬೆಂಗಳೂರು ಸಂಪೂರ್ಣ ಲಾಕ್‌ಡೌನ್ ಮಾಡಿ- ಮಾಜಿ ಸಿಎಂ ಹೆಚ್‌ಡಿಕೆ ಆಗ್ರಹ

ರೈಸಿಂಗ್ ಕನ್ನಡ:
ಬೆಂಗಳೂರು:
ಕೋವಿಡ್ 19 ಬೆಂಗಳೂರಿಗರನ್ನು ಬೆಚ್ಚಿಬೀಳಿಸಿದೆ. ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಕರಣಗಳು ಹೆಚ್ಚಾಗ್ತಿವೆ. ಮಾಜಿ ಶಾಸಕರ ಮಗಳು, ಹಾಲಿ ಸಚಿವರೊಬ್ಬರ ಕುಟುಂಬ ಸದಸ್ಯರಿಗೆ ಕೋವಿಡ್ 19 ಪಾಸಿಟಿವ್ ಬಂದಿದೆ. ಈ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ಸರಕಾರಕ್ಕೆ ಲಾಕ್ ಡೌನ್ ಮತ್ತೆ ಜಾರಿಗೊಳಿಲು ಟ್ವಿಟರ್ ಮೂಲಕ ಆಗ್ರಹಿಸಿದ್ದಾರೆ.
ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ.
ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.
ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟರ್ನಲ್ಲಿ ಮುಖ್ಯಮಂತ್ರಿಗಳಬ್ಬಯ ಆಗ್ರಹಿಸಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















