Featured
ಕೊರೊನಾ ವಿರುದ್ಧ ಫೈನಲ್ ಫೈಟ್- ಬೆಂಗಳೂರಿನ ಜೊತೆ ಜೊತೆ ಈ ಜಿಲ್ಲೆಗಳಲ್ಲೂ ಲಾಕ್‌ಡೌನ್ ಫಿಕ್ಸ್..!
![](https://risingkannada.com/wp-content/uploads/2020/07/LOCKdown.jpg)
ರೈಸಿಂಗ್ ಕನ್ನಡ ನ್ಯೂಸ್ ಬ್ಯೂರೋ:
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಲಾಕ್‌ಡೌನ್ ಘೋಷಣೆ ಬೆನ್ನಲ್ಲೇ ಈಗ ಉಳಿದ ಜಿಲ್ಲೆಗಳು ಕೂಡ ಕೊರೊವಾ ವಿರುದ್ಧ ಹೋರಾಟಕ್ಕೆ ನಿಂತಿವೆ. ಬೆಂಗಳೂರಿನ ಜೊತೆ ಜೊತೆಗೆ ಕೊರೊನಾ ಪೀಡಿತ ಇತರೆ ಜಿಲ್ಲೆಗಳು ಕೂಡ ಲಾಕ್‌ಡೌನ್ ಮೊರೆಹೋಗುವ ಲಕ್ಷಣ ಕಾಣುತ್ತಿದೆ.
ದಕ್ಷಿಣ ಕನ್ನಡ ಲಾಕ್‌ಡೌನ್..!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಿತಿ ಮೀರುತ್ತಿದೆ. ಬೆಂಗಳೂರ ನಗರ ಜಿಲ್ಲೆಯ ಬಳಿಕ ಅತೀ ಹೆಚ್ಚಿನ ಪಾಸಿಟಿವ್ ಕೇಸ್ಗಳು ದಕ್ಷಿಣ ಕನ್ನಡದಲ್ಲಿ ದಾಖಲಾಗಿದೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಲಾಕ್‌ಡೌನ್ ಮಾಡುವ ಬಗ್ಗೆ ತೀರ್ಮಾನಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹೆಚ್ಚಾಗಿ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಜಿಲ್ಲೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇವೆ. ಎಲ್ಲರೂ ಕೂಡ ಜಿಲ್ಲೆಯಲ್ಲಿ ಕನಿಷ್ಠ ಒಂದು ವಾರಗಳ ಕಾಲ ಲಾಕ್‌ಡೌನ್ ಹೇರುವ ಅಗತ್ಯ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಜುಲೈ 16ರಿಂದ ಜುಲೈ 23ರ ತನಕ ಸಂಪೂರ್ಣ ಲಾಕ್‌ಡೌನ್ ಇರಲಿದೆ.
- ಕೋಟಾ ಶ್ರೀನಿವಾಸ ಪೂಜಾರಿ, ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ
ಧಾರಾವಾಡವೂ ಲಾಕ್‌ಡೌನ್..!
ಇನ್ನು ಧಾರಾವಾಡ ಜಿಲ್ಲೆಯನ್ನು ಕೂಡ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿದೆ. ಧಾರವಾಡ ಜಿಲ್ಲೆಯಾದ್ಯಂತ ಜುಲೈ 15 ರ ಬೆಳಿಗ್ಗೆ 10 ಗಂಟೆಯಿಂದ , ಜುಲೈ 24 ರ ರಾತ್ರಿ 8 ಗಂಟೆಯವರೆಗೆ ಲಾಕ್ ಡೌನ್ ಮಾಡಲಾಗುವುದ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದಾರೆ. ನಿರ್ಮಾಣ ಕಾಮಗಾರಿ, ಕೈಗಾರಿಕೆ ಚಟುವಟಿಕೆಗಳು, ಜೀವನಾವಶ್ಯಕ ವಸ್ತುಗಳ ಪೂರೈಕೆ ಗೆ ವಿನಾಯಿತಿ ನೀಡಲಾಗಿದೆ.
![](https://risingkannada.com/wp-content/uploads/2020/04/RISING-KANNADA-logo-150px.jpg)
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್‌ಡೌನ್ ಫಿಕ್ಸಾ.?
ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಇಲ್ಲ. ಮತ್ತಷ್ಟು ಟಫ್ ರೂಲ್ಸ್ ಜಾರಿ