Connect with us

ಕ್ರೀಡೆ

Madhu Bangarappa | ಕ್ರೀಡೆ ನಮ್ಮ ಜೀವನದ ಅಗತ್ಯಗಳಲ್ಲಿ ಒಂದು : ಸಚಿವ ಎಸ್.ಮಧು ಬಂಗಾರಪ್ಪ

ಶಿವಮೊಗ್ಗ: ಕ್ರೀಡೆಗಳು ಮಾನವ ಜೀವನದ ಅಗತ್ಯಗಳಲ್ಲಿ ಒಂದಾಗಿದ್ದು ಪ್ರತಿದಿನ ನಮ್ಮ ದೈನಂದಿನ ಚಟುವಟಿಕೆಗಳ ಜೊತೆ ಯಾವುದಾದರೂ ಕ್ರೀಡೆಯನ್ನು ಆಡಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಬಲೂನ್ ಹಾರಿಸಿ, ಗುಂಡು ಎಸೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ನೌಕರರಿಂದಲೇ ರಾಜ್ಯ ಸರ್ಕಾರದ ಕೆಲಸ ಕಾರ್ಯಗಳು ನಡೆಯುತ್ತಿವೆ. ಅಧಿಕಾರಿ-ನೌಕರರ ಒತ್ತಡ ನಿರ್ವಹಣೆಗೆ ಕ್ರೀಡೆ ಸಹಕಾರಿಯಾಗಿದ್ದು ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸುವಂತೆ ತಿಳಿಸಿದರು. ಶಿಕ್ಷಣ ಇಲಾಖೆಯಿಂದಲೇ ಅತಿ ಹೆಚ್ಚು ನೌಕರರಿದ್ದು ಇದು ದೊಡ್ಡ ಇಲಾಖೆ. ಹಲವಾರು ಸಮಸ್ಯೆಗಳು ಇವೆ. ಶಿಕ್ಷಕರ ನೇಮಕ ಆಗಬೇಕಿದೆ. ನಾನು ಸಚಿವ ಸ್ಥಾನ ಸ್ವೀಕರಿಸಿದ ನಂತರ 32 ಸಾವಿರ ಸರ್ಕಾರಿ ಶಿಕ್ಷಕರ ವರ್ಗಾವಣೆಗೆ ಕ್ರಮ ವಹಿಸಿದ್ದು, 43 ಸಾವಿರ ಅತಿಥಿ ಉಪನ್ಯಾಸಕರ ನೇಮಕ ಮಾಡಿದ್ದೇನೆ. ಜೊತೆಗೆ ಹೊಸದಾಗಿ 12500 ಶಿಕ್ಷಕರ ನೇಮಕ ಆಗಿದ್ದು 11500 ಜನ ಈಗಾಗಲೇ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅಗತ್ಯ ಶಿಕ್ಷಕರ ನೇಮಕ, ಶಿಕ್ಷಕರ ಬಡ್ತಿ ಸೇರಿದಂತೆ ಇತರೆ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹಾರ ಒದಗಿಸಲಾಗುವುದು ಎಂದರು.

ಕಳೆದ ಬಜೆಟ್ನಲ್ಲಿ ಶಿಕ್ಷಣ ಇಲಾಖೆ 37,500 ಕೋಟಿ ನೀಡಿದ್ದರು. ಈ ಬಾರಿ 44,412 ಕೋಟಿ ನೀಡಿದ್ದು ಇಲಾಖೆಯಲ್ಲಿನ ಸಮಸ್ಯೆಗಳು ಬಗೆಹರಿಯುವ ನಿಟ್ಟಿನಲ್ಲಿ ಅಗತ್ಯವಾದ ಎಲ್ಲ ಕ್ರಮಗಳನ್ನು ವಹಿಸುತ್ತೇನೆ ಎಂದ ಅಂದು ಬಂಗಾರಪ್ಪನವರು ಇದೆ ನೆಹರು ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರಿಗೆ ಶೇ. 12 ರಷ್ಟು ವೇತನ ಹೆಚ್ಚು ಮಾಡಿದ್ದನ್ನು ಸ್ಮರಿಸಿದರು. ಮುಖ್ಯಮಂತ್ರಿಗಳು ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಮತ್ತು ಹಳೆ ಪಿಂಚಣಿ ವ್ಯವಸ್ಥೆ ಜಾರಿ ಬಗ್ಗೆ ಇತೀಚಿನ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಭರವಸೆ ನೀಡಿದ್ದು ಅದನ್ನು ಜಾರಿಗೆ ತರುತ್ತಾರೆಂಬ ವಿಶ್ವಾಸ ನನ್ನಲ್ಲಿದೆ. ವೇತನ ಆಯೋಗದ ವರದಿ ಬಂದ ನಂತರ ನಾನೂ ಸಹ ಸರ್ಕಾರಿ ನೌಕರರ ಹಕ್ಕುಗಳ ಬಗ್ಗೆ ಧ್ವನಿ ಎತ್ತುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದ ಅವರು ಎಲ್ಲರೂ ಸೇರಿ ಜಿಲ್ಲೆಯ ಅಭಿವೃದ್ದಿಗಾಗಿ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದರು.

ಶಾಸಕರಾದ ಎಸ್.ಎನ್.ಚನ್ನಬಸಪ್ಪ , ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಸಿ.ಎಸ್, ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮೊಹನ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ, ಪದಾಧಿಕಾರಿಗಳು ಹಾಗೂ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಸರ್ಕಾರಿ ನೌಕರರು ಹಾಜರಿದ್ದರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ