ಬೆಂಗಳೂರು
ಮೀಟಿಂಗ್ ಮೇಲ್ ಮೀಟಿಂಗ್: ನೀರಿನ ಸಮಸ್ಯೆಗೆ ಸಿಗುತ್ತಾ ಪರಿಹಾರ?
![](https://risingkannada.com/wp-content/uploads/2024/03/watert.jpg)
ಬೆಂಗಳೂರು : ದಿನೇ ದಿನೇ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಹನಿ ನೀರಿಗೂ ತಾತ್ವರ ಶುರುವಾಗಿದೆ. ಬೆಂಗಳೂರಿನಲ್ಲಿ ಜನ ನೀರಿಲ್ಲದೆ ಟ್ಯಾಂಕರ್ ಗಳ ಮೊರೆ ಹೋಗುತ್ತಿದ್ದಾರೆ. ಕೊಳವೆ ಬಾವಿಗಳು ಬತ್ತಿ ಹೋಗುತ್ತಿವೆ. ಅಂತರ್ಜಲ ಕಂಪ್ಲೀಟ್ ಕುಸಿತ ಕಾಣುತ್ತಿದೆ. ಇನ್ನು ಮಳೆಗಾಲ ಬಂದು ಬೆಂಗಳೂರಿಗೆ ನೀರಿನ ಸರಬರಾಜಾಗುವ ತಿಪ್ಪಗೊಂಡನಹಳ್ಳಿ, ಕೆಆರ್ ಎಸ್, ಕಬಿನಿ, ಹೇಮಾವತಿ ನದಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ತಿಪ್ಪಗೊಂಡನಹಳ್ಳಿ ಕೆರೆಯಂತೂ ಬರಿದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ನೀರು ಸರಬರಾಜು ಮಾಡೋದು ಸವಾಲಿನ ಕೆಲಸವಾಗಿದೆ.
![](https://risingkannada.com/wp-content/uploads/2024/03/watere-1024x1024.jpg)
ಈ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ನೀಗಿಸಲು ಬ್ಯಾಕ್ ಟು ಬ್ಯಾಕ್ ಮೀಟಿಂಗ್ ನಡೆಯುತ್ತಿವೆ. ಇಂದು ಸಹ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಬಿಬಿಎಂಪಿ ಜಲಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಡಿಕೆಶಿ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ ಜಲಮಂಡಳಿ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳ ಜೊತೆ ಡಿಕೆ ಶಿವಕುಮಾರ್ ಸಭೆ ನಡೆಸಿ ನೀರಿಗೆ ಶಾಶ್ವತ ಪರಿಹಾರವನ್ನ ಕೈಗೊಳ್ಳುವ ಸಾಧ್ಯತೆ ಇದೆ.
![](https://risingkannada.com/wp-content/uploads/2024/03/wateer-1024x1024.jpg)
ಕುಡಿಯುವ ನೀರಿನ ಸಮಸ್ಯೆ, ಟ್ಯಾಂಕರ್ ನೀರಿನ ದರ ಫಿಕ್ಸ್, ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳ ನೀರಿನ ಸಮಸ್ಯೆ ಕುರಿತು ಚರ್ಚೆ ನಡೆಯಲಿದೆ. ಸಭೆಯಲ್ಲಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, 8 ವಲಯಗಳ ಆಯುಕ್ತರು, ಜಲಮಂಡಳಿ ಅಧ್ಯಕ್ಷ ರಾಮ್ ಪಸಾತ್ ಮನೋಹರ್, ಇಂಜಿನಿಯರ್ ಗಳು , ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ಇತರೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?