Featured
ಅನ್ಲಾಕ್ ನಂತರ ಮೈಲಾಪುರ ದೇವಸ್ಥಾನ ಓಪನ್: ನಾಲ್ಕು ತಿಂಗಳ ನಂತರ ಭಕ್ತರ ದರ್ಶನಕ್ಕೆ ಅವಕಾಶ
![](https://risingkannada.com/wp-content/uploads/2020/09/yadgiri-new.jpg)
ರೈಸಿಂಗ್ ಕನ್ನಡ:
ಯಾದಗಿರಿ:
ಕಳೆದ ನಾಲ್ಕು ತಿಂಗಳ ನಂತರ ಬಂದ್ ಆಗಿದ್ದ ಮೈಲಾಪುರ ಮೈಲಾರಲಿಂಗೇಶ್ವರ ದೇವಸ್ಥಾನ ಇಂದು ಓಪನ್ ಮಾಡಿ ದೇವಸ್ಥಾನ ಶುಚಿಗೊಳಿಸಿ ವಿವಿಧ ಪೂಜೆ ನಂತರ ಭಕ್ತರಿಗೆ ದರ್ಶನ ಭಾಗ್ಯಕ್ಕೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ.
ಯಾದಗಿರಿ ತಾಲೂಕಿನ ಮೈಲಾಪುರ ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖ್ಯಾತಿಯಾದ ಧಾರ್ಮಿಕ ಕ್ಷೇತ್ರವಾಗಿದೆ.ಯಾದಗಿರಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆ, ಕೋವಿಡ್ 19 ಮುಂಜಾಗ್ರತೆ ವಹಿಸಿ ದೇವಸ್ಥಾನ ಬಂದ್ ಮಾಡಲಾಗಿತ್ತು.
ಈಗ ಲಾಕ್ ಡೌನ್ ತೆಗೆದ ಹಿನ್ನೆಲೆ ಜಿಲ್ಲಾಡಳಿತದ ಸೂಚನೆ ಮೇರೆಗೆ ಶುಕ್ರವಾರ ಬೆಳಗ್ಗೆ ವಿಶೇಷ ಪೂಜೆ ಮಾಡಿದ ನಂತರ ಭಕ್ತರಿಗೆ ಮಲ್ಲಯ್ಯ ನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ನಾಲ್ಕು ತಿಂಗಳ ನಂತರ ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಆಗಮಿಸಿ ಮಲ್ಲಯ್ಯನ ದರ್ಶನ ಪಡೆಯುತ್ತಿದ್ದಾರೆ.ಕೊರೊನಾ ಭೀತಿ ಹಿನ್ನಲೆಯಲ್ಲಿ ಮುಂಜಾಗ್ರತೆ ವಹಿಸಿ ದೇವಸ್ಥಾನದ ಆಡಳಿತ ಮಂಡಳಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?