Connect with us

ಬೆಂಗಳೂರು

ತವರು ಜಿಲ್ಲೆಯಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಸಚಿವ ಎಂ ಬಿ ಪಾಟೀಲ ದಾಪುಗಾಲು

ಬೆಂಗಳೂರು: ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ತಮ್ಮ ತವರು ಜಿಲ್ಲೆ ವಿಜಯಪುರದಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಮುಂದಡಿ ಇಟ್ಟಿದ್ದು, ಈ ನಿಟ್ಟಿನಲ್ಲಿ ಪವನ ವಿದ್ಯುತ್‌ ಮತ್ತು ಸೌರವಿದ್ಯುತ್‌ ಕ್ಷೇತ್ರಗಳ ದೈತ್ಯ ಕಂಪನಿಗಳಾಗಿರುವ ಸುಜ್ಲಾನ್‌ ಮತ್ತು ರೆನೈಸಾನ್ಸ್‌ ಕಂಪನಿಗಳ ಉನ್ನತಾಧಿಕಾರಿಗಳ ಜತೆ ಮಂಗಳವಾರ ಇಲ್ಲಿ ಮಾತು ನಡೆಸಿದರು.

ಸುಜ್ಲಾನ್‌ ಸಮೂಹದ ಸಿಇಒ ಜೆ ಪಿ ಚಲಸಾನಿ ಮತ್ತು ರೆನೈಸಾನ್ಸ್‌ ಸೋಲಾರ್‌ ಮತ್ತು ಎಲೆಕ್ಟ್ರಾನಿಕ್‌ ಮೆಟೀರಿಯಲ್ಸ್‌ ಕಂಪನಿಯ ಸಿಇಒ ಮಿಲಿಂದ್‌ ಕುಲಕರ್ಣಿ ಈ ಮಹತ್ವದ ಮಾತುಕತೆಗಳಲ್ಲಿ ಪಾಲ್ಗೊಂಡಿದ್ದರು.

ಬಳಿಕ ಮಾತನಾಡಿದ ಸಚಿವರು, ʻಸುಜ್ಲಾನ್‌ ಕಂಪನಿಯು ಪವನ ವಿದ್ಯುತ್‌ ಕ್ಷೇತ್ರಕ್ಕೆ ಅಗತ್ಯವಿರುವ 160 ಮೀಟರ್‌ ಎತ್ತರದ ಕಂಬಗಳು ಮತ್ತು 70 ಮೀಟರ್‌ ಉದ್ದದ ಬೃಹತ್‌ ಬ್ಲೇಡುಗಳ ಉತ್ಪಾದನೆಗೆ ಹೆಸರಾಗಿದ್ದು, ವಿಜಯಪುರದಲ್ಲಿ ಹಂತಹಂತವಾಗಿ 30 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದೆ ಬಂದಿದೆ. ಮೊದಲ ಹಂತದಲ್ಲಿ ಕಂಪನಿಯು ಬ್ಲೇಡುಗಳ ತಯಾರಿಕಾ ಘಟಕ ಆರಂಭಿಸಲು ತೀರ್ಮಾನಿಸಿದ್ದು, 100 ಎಕರೆ ಜಮೀನನ್ನು ಕೇಳಿದೆ. ಇದು ವಿಜಯಪುರ ಜಿಲ್ಲೆಗೆ ಹರಿದು ಬರಲಿರುವ ಬೃಹತ್‌ ಹೂಡಿಕೆಯಾಗಲಿದೆʼ ಎಂದರು.

ಈಗಾಗಲೇ ನಡೆಸಿರುವ ಅಧ್ಯಯನಗಳ ಪ್ರಕಾರ ಇಡೀ ದೇಶದಲ್ಲಿ ವಿಜಯಪುರ, ಆಂಧ್ರಪ್ರದೇಶದ ಅನಂತಪುರ ಮತ್ತು ರಾಜಾಸ್ಥಾನದ ಜೈಸಲ್ಮೇರ್‌ ಮಾತ್ರ ಪವನ ವಿದ್ಯುತ್‌ ಉತ್ಪಾದನೆಗೆ ಅತ್ಯಂತ ಪ್ರಶಸ್ತ ತಾಣಗಳೆಂದು ಗೊತ್ತಾಗಿದೆ. ಅನಂತಪುರ ಮತ್ತು ಜೈಸಲ್ಮೇರ್‌ ಗಳಲ್ಲಿ ಸುಜ್ಲಾನ್‌ ಕಂಪನಿಯು ಈಗಾಗಲೇ ಕ್ರಮವಾಗಿ 2,000 ಮತ್ತು 3,000 ಮೆಗಾವ್ಯಾಟ್‌ ಉತ್ಪಾದನಾ ಸಾಮರ್ಥ್ಯದ ಪವನ ವಿದ್ಯುತ್‌ ಘಟಕಗಳನ್ನು ಹೊಂದಿದೆ. ವಿಜಯಪುರದಲ್ಲಿ ಕಂಪನಿಯು 5,000 ಮೆಗಾವ್ಯಾಟ್‌ ಸಾಮರ್ಥ್ಯದ ಘಟಕವನ್ನು ಪ್ರಾರಂಭಿಸಲಿದ್ದು, ಇದು ದೇಶದಲ್ಲೇ 2ನೇ ಅತೀ ದೊಡ್ಡ ಪವನ ವಿದ್ಯುತ್‌ ಘಟಕವಾಗಿರಲಿದೆ ಎಂದು ಅವರು ತಿಳಿಸಿದರು.

Advertisement

ಸುಜ್ಲಾನ್‌ ಕಂಪನಿಯು ಇಲ್ಲಿ ತಯಾರಿಸಲಿರುವ ಕಂಬ ಮತ್ತು ಬ್ಲೇಡುಗಳನ್ನು ಸ್ಥಳೀಯವಾಗಿಯೇ ಬಳಸಲಿದೆ. ಕಂಪನಿಗೆ ಅಗತ್ಯವಿರುವ 100 ಎಕರೆ ಜಮೀನನ್ನು ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೊಡಲು ಏನೂ ಸಮಸ್ಯೆ ಇಲ್ಲ. ಅಕಸ್ಮಾತ್‌ ಕಂಪನಿಯು ಜಿಲ್ಲೆಯ ಬೇರೆಡೆಗಳಲ್ಲಿ ತನಗೆ ಅಗತ್ಯವಿರುವ ಸೂಕ್ತ ಭೂಮಿ ಲಭ್ಯವಿದೆ ಎಂದು ಭಾವಿಸಿದರೆ, ಅಷ್ಟು ಪ್ರಮಾಣದ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಕೊಡಲಾಗುವುದು. ಒಟ್ಟಿನಲ್ಲಿ ಈ ಕಂಪನಿಯು ವಿಜಯಪುರಕ್ಕೆ ಬರಬೇಕು ಎನ್ನುವುದು ಸರಕಾರದ ಗುರಿಯಾಗಿದ್ದು, ಇದಕ್ಕಾಗಿ ʻಬಿಯಾಂಡ್‌ ಬೆಂಗಳೂರುʼ ಉಪಕ್ರಮದಡಿ ಇರುವ ಸೌಲಭ್ಯ, ಪ್ರೋತ್ಸಾಹಗಳನ್ನೆಲ್ಲ ಕೊಡಲಾಗುವುದು. ಇದಕ್ಕೆ ಕಂಪನಿಯ ಸಿಇಒ ಒಪ್ಪಿಕೊಂಡಿದ್ದು, ಸದ್ಯದಲ್ಲೇ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ, ಅಂತಿಮವಾಗಿ ಒಡಂಬಡಿಕೆಗೆ ಸಹಿ ಹಾಕಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ