Featured
ಸೋಂಕಿತರಿಗೆ ಶೇ.50ರಷ್ಟು ಹಾಸಿಗೆ ಕೊಡಿ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಪ್ರಭು ಚೌಹಾಣ್ ಮನವಿ
ರೈಸಿಂಗ್ ಕನ್ನಡ:
ಬೀದರ್:
ಕೋವಿಡ್-19 ನಿರ್ವಹಣೆಗೆ ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಒದಗಿಸಬೇಕು ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚವ ಪ್ರಭುಚೌಹಾಣ್ ಜಿಲ್ಲೆಯ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸಚಿವರು ಮನವಿ ಮಾಡಿಕೊಂಡರು.
ಜಿಲ್ಲಾಧಿಕಸರಿಗಳ ಕಚೇರಿಯಲ್ಲಿ ಕೋವಿಡ್-19 ನಿರ್ವಹಣೆಯು ಬೀದರನ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಪಶು ಸಂಗೋಪನೆ, ಹಜ್ ಮತ್ತು ವಕ್ಫ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಜುಲೈ 27ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯರು, ಆಡಳಿತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಾಹಿತಿ ಪಡೆದರು.ಇನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕಡ್ಡಾಯ ಆದೇಶವಿದ್ದು ಇದನ್ನು ಎಲ್ಲರೂ ಪಾಲನೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಮಹಾಮಾರಿ ತಡೆಗೆ ತಮ್ಮ ಸಹಕಾರ ಬೇಕೇ ಬೇಕು. ರಾಜ್ಯ ಸರ್ಕಾರ ತಮ್ಮ ಜೊತೆಗೆ ಇರುತ್ತದೆ. ತಾವುಗಳು ಸಹಾಯ ಮಾಡಲೇಬೇಕು. ನಾನು ಬಿಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ವೈದ್ಯರು ದೇವರಿಗೆ ಸಮಾನ ಎನ್ನಲಾಗುತ್ತದೆ. ಹೀಗಾಗಿ ಕೋವಿಡ್ ಮಹಾಮಾರಿ ತಡೆಗೆ ತಮ್ಮೆಲ್ಲರ ಸಹಕಾರ ಅತೀ ಅಗತ್ಯವಿದೆ. ತಮಗೆ ಏನಾದರು ತೊಂದರೆಯಾದಲ್ಲಿ ತಮಗೆ ಕರೆ ಮಾಡಿ ತಿಳಿಸಿದಲ್ಲಿ ಸಹಾಯ ಸಹಕಾರ ಮಾಡುವುದಾಗಿ ಹೇಳಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?