Featured
ಪ್ರವಾಹ ಪ್ರದೇಶಗಳಿಗೆ ಸಚಿವ ರಮೇಶ್ ಜಾರಕಿಹೊಳಿ: ಲೈಫ್ ಜಾಕೆಟ್ ಧರಿಸಿ ಪರಿಸ್ಥಿತಿ ಅವಲೋಕಿಸಿದ ಸಚಿವ
![](https://risingkannada.com/wp-content/uploads/2020/08/ramesh-jarkiholli-2.jpg)
ರೈಸಿಂಗ್ ಕನ್ನಡ :
ಚಿಕ್ಕೋಡಿ :
ಕೃಷ್ಣಾನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಬೋಟ್ ಮೂಲಕ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.
ಚಿಕ್ಕೋಡಿ ತಾಲೂಕಿನ ಅಂಕಲಿ, ಮಾಂಜರಿ, ಯಡೂರ ಗ್ರಾಮದ ಕೃಷ್ಣಾನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಯವರು ನೆರೆ ಪರಿಸ್ಥಿತಿಯನ್ನು ಅವಲೋಕಿಸಿದರು. ನಂತರ ಯಡೂರ ಗ್ರಾಮದ ನದಿತೀರದಲ್ಲಿ ಲೈಫ್ ಜಾಕೆಟ್ ಧರಿಸಿ ಬೋಟ್ ಮೂಲಕ ಪ್ರವಾಹ ಪರಿಸ್ಥಿತಿಯನ್ನು ರಮೇಶ್ ಜಾರಕಿಹೊಳಿ ಅವಲೋಕಿಸಿದರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಾರಕಿಹೊಳಿ, ಕಳೆದ ಬಾರಿಗಿಂತ ಈ ಬಾರಿ ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕೋಯ್ನಾ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿಲ್ಲ. ಇದರಿಂದ ನದಿತೀರದ ಜನರು ಹೇದರುವ ಅವಶ್ಯಕತೆಯಿಲ್ಲ. ಪ್ರವಾಹ ನಿಯಂತ್ರಣಕ್ಕೆ ಸರ್ಕಾರ ಬದ್ದವಾಗಿದ್ದು ಪ್ರವಾಹಕ್ಕೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಡಳಿತದ ಅಧಿಕಾರಿಗಳು ಸಹ ಪ್ರವಾಹ ನಿಯಂತ್ರಣದ ವಿಷಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
![Puradamma](https://risingkannada.com/wp-content/uploads/2020/08/Puradamma.jpg)
ಇನ್ನು ಕಳೆದ ವರ್ಷ ಪ್ರವಾಹದಲ್ಲಿ ಹಾನಿಗೊಳಗಾದ ಮನೆಗಳಿಗೆ ಪರಿಹಾರದ ಹಣ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದೆ. ಶೀಘ್ರವೇ ಆ ಸಮಸ್ಯೆಗಳನ್ನು ಪರಿಹರಿಸಿ ಪರಿಹಾರದ ಹಣವನ್ನು ಒದಗಿಸಲಾಗುವುದು ಎಂದು ರಮೇಶ್ ಜಾರಕಿಹೋಳಿ ಭರವಸೆ ನೀಡಿದರು.
ಒಟ್ಟಾರೆ ಕೃಷ್ಣಾ ನದಿ ತೀರದ ಪ್ರವಾಹ ಸ್ಥಳಗಳಿಗೆ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?