Featured
ಪಿಎಫ್ಐ, ಎಸ್ಡಿಪಿಐ ಮೇಲಿನ ಕೇಸ್ ಹಿಂಪಡೆದಿದ್ದೆ ಗಲಭೆಗೆ ಕಾರಣ: ಕಾಂಗ್ರೆಸ್ ವಿರುದ್ಧ ಸಿಸಿ ಪಾಟೀಲ್ ಕಿಡಿ
ರೈಸಿಂಗ್ ಕನ್ನಡ :
ಗದಗ :
ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆಗೆ ಹಿಂದಿನ ಕಾಂಗ್ರೆಸ್ ಸರ್ಕಾರ ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆ ಮೇಲೆ ಪ್ರಕರಣ ಹಿಂದಕ್ಕೆ ತೆಗೆದುಕೊಂಡಿದ್ದೆ ಕಾರಣ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಗದಗದಲ್ಲಿ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಕುರಿತು ಮಾತನಾಡಿರುವ ಅವರು, ಇಂದೊಂದು ಪೂರ್ವ ನಿಯೋಜಿತ ಸಂಚು. ಕೇವಲ ಒಂದು ವಾಟ್ಸಪ್ ಮೆಸೇಜ್ ನಿಂದ 2 ಸಾವಿರದಿಂದ 3 ಸಾವಿರ ಜನ್ರು ಸೇರುತ್ತಾರೆ ಎಂದ್ರೆ ಹೇಗೆ ಎಂದು ಪ್ರಶ್ನಿಸಿದರು.
ಇಷ್ಟೇಲ್ಲಾ ಗಲಾಟೆ ಹಿಂಸಾಚಾರ ನಡೆದ್ರು ಕಾಂಗ್ರೆಸ್ ಪಕ್ಷದ ಖಂಡಿಸುತ್ತಿಲ್ಲಾ.ಕಾಂಗ್ರೆಸ್ ಪಕ್ಷಕ್ಕೂ ಹಾಗೂ ಇವರಿಗೂ ನಿಕಟವಾದ ಸಂಪರ್ಕ ಇದೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿ ಮಾಡಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ತರಬೇಕು ಎನ್ನುವದೇ ಕಾಂಗ್ರೆಸ್ ಉದ್ದೇಶವಾಗಿದೆ ಎಂದರು.
ಎಸ್ಡಿಪಿಐ ಸಂಘಟನೆಯನ್ನ ನಿಷೇಧಿಸುವ ಕುರಿತು ಮುಂದಿನ ಗುರುವಾರ ಕ್ಯಾಬಿನೆಟ್ ನಲ್ಲಿ ನಿರ್ಧಾರವಾಗುತ್ತದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದವರ ಆಸ್ತಿಯನ್ನು ಉತ್ತರ ಪ್ರದೇಶದ ಮಾದರಿಯಲ್ಲಿ ವಸೂಲಿ ಮಾಡಬೇಕು ಎನ್ನುವ ಕುರಿತು ಚರ್ಚೆ ನಡೆದಿದ್ದು ಮುಂದಿನ ಕ್ರಮ ಆಗುತ್ತದೆ ಎಂದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?