Featured
ದಾವಣಗೆರೆಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ: ಅದೃಷ್ವವಶಾತ್ ಪ್ರಾಣಾಪಾಯದಿಂದ ಪಾರು

ರೈಸಿಂಗ್ ಕನ್ನಡ:
ದಾವಣಗೆರೆ:
ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೀಡಾಗಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಅಪಘಾತದ ರಭಸಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್, ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯವಾಗಿದೆ.
ಡಿವೈಡರ್ ಬಳಿ KA 05 AR 6577 ನಂಬರಿನ ಲಾರಿ, KA03 NE 8 ನಂಬರಿನ ಲ್ಯಾಂಡ್ ರೋವರ್ ಕಾರ್ ನಡುವೆ ಡಿಕ್ಕಿಯಾಗಿದೆ. ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಹೈಟೆಕ್ ಆಸ್ಪತ್ರೆ ಗಾಯಾಳುಗಳ ಕಳುಹಿಸಲಾಗಿದೆ. ಅದೃಷ್ವವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್ ಐ ಕಿರಣ್ ಕುಮಾರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಅಪಘಾತ ಸಂಭವಿಸಿದ ಬಳಿಕ ಸರ್ವಿಸ್ ರಸ್ತೆ ನಿರ್ಮಾಣ ಮಾಡುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ. ಪದೇ ಪದೇ ಅಪಘಾತ ನಡೆದರು ಕ್ರಮ ವಹಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರ್ಧಬರ್ಧ ರಸ್ತೆ ನಿರ್ಮಾಣ ಮಾಡಿ ಕಾಮಗಾರಿ ನಿಲ್ಲಿಸಲಾಗಿದೆ ಎಮದು ಅಸಮಾಧಾನ ಹೊರ ಹಾಕಿದ್ದಾರೆ. ಈ ಹಿನ್ನಲೆಯಲ್ಲಿಯೇ ಸರಣಿ ಅಪಘಾತಗಳು ನಡೆಯುತ್ತಿವೆ ಎಂದು ದೂರಿದ್ದಾರೆ. ಈ ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?