Featured
ನೀಟ್ ಪರೀಕ್ಷೆಯಲ್ಲಿ 9ನೇ ಸ್ಥಾನ : ಉಸ್ತುವಾರಿ ಸಚಿವ ಪ್ರಭುಚೌಹಾಣ್ರಿಂದ ಅಭಿನಂದನೆ
![](https://risingkannada.com/wp-content/uploads/2020/10/bidar-chauan1.jpg)
ರೈಸಿಂಗ್ ಕನ್ನಡ:
ಬೀದರ್:
ನೀಟ್ (NIIT) ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಹಾಗೂ ದೇಶಕ್ಕೆ ಒಂಬತ್ತನೇ ಱಂಕ್ ಕಾರ್ತಿಕ್ ರೆಡ್ಡಿಗೆ ಪಶು ಸಂಗೋಪನಾ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭುಚೌಹಾಣ್ ಅಭಿನಂದಿಸಿದರು.
ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂದು ಹಣೆ ಪಟ್ಟಿ ಕಟ್ಟಿಕೊಂಡಿರುವ ಬೀದರ್ ನಿವಾಸಿ ಕಾರ್ತಿಕ್ ನಿಟ್ ಪರಿಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮಸ್ಥಾನ ಹಾಗೂ ದೇಶದಲ್ಲೇ 9ನೇ ಱಂಕ್ ಪಡೆಯುವ ಮೂಲಕ ಬೀದರ್ ಕೀರ್ತಿ ಹೆಚ್ವಿಸಿ ಇಡೀ ದೇಶದಾದ್ಯಂತ ಬೀದರ ಜಿಲ್ಲೆಯ ಗಮನ ಸೆಳೆದಿದ್ದಾರೆ.
![](https://risingkannada.com/wp-content/uploads/2020/10/bidar-2-1024x576.jpg)
ಹೀಗಾಗಿ ಬೀದರ್ ನಗರದ ಗುಂಪಾದಲ್ಲಿನ ಕಾರ್ತಿಕ್ ಅವರ ನಿವಾಸಕ್ಕೆ ಪಶುಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭುಚೌಹಾಣ್ ಭೇಟಿ ನೀಡಿ ಕಾರ್ತಿಕ್ ರೆಡ್ಡಿ ಅವರಿಗೆ ಸನ್ಮಾನಿಸಿ 11 ಸಾವಿರ ರೂಪಾಯಿ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು.
ರಾಜ್ಯದಲ್ಲೇ ಬೀದರ್ ಜಿಲ್ಲೆ ಅಂದರೆ ಶೈಕ್ಷಣಿಕವಾಗೂ ಹಿಂದುಳಿದ ಜಿಲ್ಲೆ ಎಂದು ಹಣೆ ಪಟ್ಟಿ ಕಟ್ಟಿಕೊಂಡಿದೆ, ಇಂತಹ ಸಂಧರ್ಭದಲ್ಲೆ ಕಾರ್ತಿಕ್ ಅವರು ಕಷ್ಟಪಟ್ಟು ಓದಿದ ಪರಿಶ್ರಮಕ್ಕೆ ಉತ್ತಮ ಱಂಕ್ ಪಡೆಯುವ ಮೂಲಕ ಜಿಲ್ಲೆಯಲ್ಲಿ ಶೈಕ್ಷಣಿಕ ವಾಗಿ ಅಭಿವೃದ್ಧಿ ಯತ್ತ ಸಾಗಿದೆ ಎಂದು ದೇಶಕ್ಕೆ ತೋರಿಸಿಕೊಟ್ಟಿದ್ದಾರೆ. ಈ ಸಾಧನೆಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಪ್ರಭುಚೌಹಾಣ್ ಹೇಳಿದರು.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್