Featured
ಸುಸಜ್ಜಿತ ಪಶುವೈದ್ಯಕೀಯ ಆಸ್ಪತ್ರೆಗೆ ಶಂಕುಸ್ಥಾಪನೆ – 8 ತಿಂಗಳಲ್ಲಿ ನಿರ್ಮಾಣ ಕಾಮಗಾರಿ ಪೂರ್ಣ ಅಂದ್ರು ಸಚಿವ ಕೆ.ಎಸ್ ಈಶ್ವರಪ್ಪ

ರೈಸಿಂಗ್ ಕನ್ನಡ :
ಶಿವಮೊಗ್ಗ :
ಸುಸಜ್ಜಿತ ಜಿಲ್ಲಾ ಪಶು ವೈದ್ಯಕೀಯ ಪಾಲಿಕ್ಲಿನಿಕ್ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಸುಸಜ್ಜಿತವಾದ ಆಸ್ಪತ್ರೆಯಲ್ಲಿ ಸಣ್ಣ ಮತ್ತು ದೊಡ್ಡ ಪ್ರಾಣಿಗಳಿಗೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಇರಲಿದೆ. ಸ್ಕ್ಯಾನಿಂಗ್, ಎಕ್ಸ್‌ರೇ, ರಕ್ತ ಪರೀಕ್ಷೆ ಸೇರಿದಂತೆ ಸುಸಜ್ಜಿತ ಲ್ಯಾಬ್ ವ್ಯವಸ್ಥೆ ಇಲ್ಲಿ ಲಭ್ಯವಾಗಲಿದೆ. ಈ ಆಸ್ಪತ್ರೆಯಲ್ಲಿ ಸರ್ಜರಿ, ಗೈನಕಾಲಜಿ ಮತ್ತು ಮೆಡಿಸಿನ್ ಮೂರು ವಿಭಾಗಗಳಿರಲಿದ್ದು, ತಜ್ಞ ವೈದ್ಯರು ಸೇವೆ ಸಲ್ಲಿಸಲಿದ್ದಾರೆ ಎಂದರು.
ಸುಮಾರು 2.11ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, 8 ತಿಂಗಳ ಒಳಗಾಗಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಜಿಲ್ಲಾ ಮಟ್ಟದಲ್ಲಿ ಇದು ರೆಫರಲ್ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸಲಿದೆ. ರಾಜ್ಯದಲ್ಲಿ ಇಂತಹ 17 ಆಸ್ಪತ್ರೆಗಳಿದ್ದು, ಇಲ್ಲಿ ಪ್ರಾಣಿಗಳಿಗೆ ಎಲ್ಲಾ ವಿಧದ ಚಿಕಿತ್ಸೆ ಒಂದೇ ಸೂರಿನಡಿ ಲಭ್ಯವಾಗಲಿದೆ ಎಂದು ತಿಳಿಸಿದ್ರು.
ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ. ಸದಾಶಿವ ಮತ್ತಿತರರು ಸಂದರ್ಭದಲ್ಲಿ ಉಪಸ್ಥಿತರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?