Featured
ಸಿಎಂ ಬಿಎಸ್ ವೈ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಗುಡುಗಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ರೈಸಿಂಗ್ ಕನ್ನಡ:
ವಿಜಯಪುರ:
ಸಿಎಂ ಯಡಿಯೂರಪ್ಪ ಅಧಿಕಾರಿದಲ್ಲಿ ಹೆಚ್ಚು ದಿನ ಮುಂದುವರೆಯುವುದಿಲ್ಲ ಎಂದು ವಾಗ್ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಬಿಎಸ್ವೈ ವಿರುದ್ಧದ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಫೇಸ್‌ಬುಕ್ ಮೂಲಕ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ವ್ಯಾಮೋಹದ ಬಗ್ಗೆ ಟಾಂಗ್ ನೀಡಿದ್ದಾರೆ. ಯತ್ನಾಳ್ ಅವರ ಶಿಷ್ಯ ರಾಘವ ಅಣ್ಣಿಗೇರಿ ಮತ್ತು ಇತರರು ಮಾಡಿರುವ ಫೇಸ್ ಬುಕ್ ಪೋಸ್ಟ್ ಗಳನ್ನು ಯತ್ನಾಳ ಹೆಸರಿನಲ್ಲಿರುವ ಫೇಸ್‌ಬುಕ್ ಪೇಜ್ ನಲ್ಲಿ ಶೇರ್ ಮಾಡಲಾಗಿರುವುದು ಇದೀಗ ವ್ಯಾಪಕ ಚರ್ಚೆಗೆ ಗುರಿಯಾಗಿದೆ.
ಈ ಪೋಸ್ಟ್ ನಲ್ಲಿ ರಾಘವ ಅಣ್ಣಿಗೇರಿ, ಅಪ್ಪನ ಹೆಸರಿಂದ ರಾಜ್ಯಭಾರ ಮಾಡುತ್ತಿರುವವರೇ ಉತ್ತರ ಕರ್ನಾಟಕದವರ ಬಗ್ಗೆ ಹಗುರವಾಗಿ ಮಾತನಾಡಿದರೆ ಜನರು ಕ್ಷಮಿಸುವುದಿಲ್ಲ ಎಚ್ಚರ” ಎಂದು ಫೇಸ್ ಬುಕ್ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಪತ್ರಿಕೆಯ ವರದಿಯೊಂದನ್ನು ಟ್ಯಾಗ್ ಮಾಡಿ, “ವಿಜಯೇಂದ್ರ ಒಬ್ಬನೇ ಎಲ್ಲ ಚುನಾವಣೆಗಳನ್ನು ಗೆಲ್ಲಿಸುವುದಾದರೆ ಉಳಿದವರು ಏನು ಎಂದು ಪ್ರಶ್ನಿಸಿದ್ದಾರೆ.
ವಿಜಯೇಂದ್ರ ನೇತೃತ್ವದಲ್ಲಿ ಎರಡೂ ಕ್ಷೇತ್ರ ಗೆಲ್ಲುತ್ತೇವೆ” ಎಂದು ಯಡಿಯೂರಪ್ಪ ಹೇಳಿಕೆ ನೀಡಿರುವ ಪತ್ರಿಕಾ ವರದಿಯನ್ನು ಈ ಪೋಸ್ಟ್ ಗೆ ಟ್ಯಾಗ್ ಮಾಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?