Featured
ಮೋದಿ ದೇಶದ ಆಧುನಿಕ ಭಸ್ಮಾಸುರ, ಎಲ್ಲವನ್ನೂ ಭಸ್ಮ ಮಾಡ್ತಿದ್ದಾರೆ..!

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಭಾರತದ ಆಧುನಿಕ ಭಸ್ಮಾಸುರ. ಒಂದೊಂದಾಗಿ ಎಲ್ಲವನ್ನೂ ಭಸ್ಮ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಆಕ್ರೋಶ ಹೊರ ಹಾಕಿದ್ದಾರೆ. ಪ್ರಧಾನಿ ಮೋದಿ, ಐಟಿ, ಇಡಿ ಎಲ್ಲವನ್ನೂ ಭಸ್ಮ ಮಾಡಿದ್ದಾರೆ. ಈಗ ಗವರ್ನರ್ ಸ್ಥಾನಮಾನ ಕೂಡ ಭಸ್ಮ ಮಾಡ್ತಿದ್ದಾರೆ. ಇದೆಲ್ಲವನ್ನ ಸುಪ್ರೀಂಕೋರ್ಟ್ ಹಾಗೂ ದೇಶದ ಜನತೆ ನೋಡ್ತಿದ್ದಾರೆ ಎಂದು ಉಗ್ರಪ್ಪ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತ್ನಾಡಿದ ವಿ.ಎಸ್. ಉಗ್ರಪ್ಪ, ಶಿವಸೇನೆ 30 ವರ್ಷಗಳಿಂದ ಎನ್ಡಿಎ ಮೈತ್ರಿಕೂಟದಲ್ಲಿತ್ತು. ಈಗ ಅಲ್ಲಿಂದ ವಾಪಸ್ ತೆಗೆದುಕೊಂಡಿದ್ದಾರೆ. ಎನ್ಸಿಪಿ, ಕಾಂಗ್ರೆಸ್ ಜೊತೆ ಶಿವಸೇನೆ ಮಾತುಕತೆ ನಡೆದಿತ್ತು. ಆದ್ರೆ, ಮಾತುಕತೆ ನಡೆದಿರುವಾಗಲೇ ರಾಜ್ಯಪಾಲರು ಅವಕಾಶ ನಿರಾಕರಿಸಿದ್ದಾರೆ. ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ. ಇದೆಲ್ಲವೂ ಪ್ರಧಾನಿ ಮೋದಿ ಅವರ ಕುತಂತ್ರದಿಂದಲೇ ನಡೆದಿದೆ ಎಂದು ಉಗ್ರಪ್ಪ ಆರೋಪಿಸಿದ್ರು.
ಆಧುನಿಕ ಭಸ್ಮಾಸುರರಂತೆ ಮೋದಿ, ಪ್ರಜಾಪ್ರಭುತ್ವವನ್ನೂ ಭಸ್ಮ ಮಾಡೋಕೆ ಹೊರಟಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲರನ್ನ ಬಿಜೆಪಿ ಏಜೆಂಟ್ ಮಾಡಿಕೊಂಡಿದ್ದಾರೆ. ಅಲ್ಲಿನ ವ್ಯವಸ್ಥೆಯನ್ನ ಬುಡಮೇಲು ಮಾಡಿದ್ದಾರೆ. ಸರ್ಕಾರ ರಚನೆಗೆ ಅವಕಾಶವನ್ನೇ ನೀಡಿಲ್ಲ ಎಂದು ಉಗ್ರಪ್ಪ ಕಿಡಿಕಾರಿದ್ರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















