ಕ್ರೀಡೆ
ಸಚಿನ್ ಮುಂದೆಯೇ ಅವರ 29 ವರ್ಷದ ದಾಖಲೆಯನ್ನ ಬ್ರೇಕ್ ಮಾಡಿದ ಮುಶೀರ್ ಖಾನ್!
![](https://risingkannada.com/wp-content/uploads/2024/03/trophy.png)
Cricket : ಮುಶೀರ್ ಖಾನ್ ಈ ವರ್ಷದ ರಣಜಿ ಟ್ರೋಫಿಯಲ್ಲಿ ಅಗ್ರ ಫಾರ್ಮ್‌ನಲ್ಲಿದ್ದಾರೆ. ತಮಿಳುನಾಡು ವಿರುದ್ಧದ ಸೆಮಿಫೈನಲ್‌ನಲ್ಲಿ ಅರ್ಧಶತಕ ಗಳಿಸಿದ್ದರು. ಇದಕ್ಕೂ ಮುನ್ನ ಬರೋಡಾ ವಿರುದ್ಧದ ಕ್ವಾರ್ಟರ್ ಫೈನಲ್‌ನಲ್ಲಿ ದ್ವಿಶತಕ ಗಳಿಸಿದ್ದರು. ಕಳೆದ ತಿಂಗಳು ನಡೆದ 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಮುಶೀರ್ ಎರಡು ಶತಕ ಸೇರಿದಂತೆ 360 ರನ್ ಗಳಿಸಿದ್ದರು.
ಮುಂಬೈ ಬ್ಯಾಟ್ಸ್‌ಮನ್ ಮುಶೀರ್ ಖಾನ್ ರಣಜಿ ಫೈನಲ್‌ನಲ್ಲಿ ಭರ್ಜರಿ ಶತಕ ಸಿಡಿಸಿ ಮುಂಚುವ ಮೂಲಕ ಅಣ್ಣನಿಗೆ ತಕ್ಕ ತಮ್ಮ ಎನಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೆ ಸಹೋದರ ಸರ್ಫರಾಜ್ ಖಾನ್ ಭಾರತ ತಂಡವನ್ನು ಪ್ರವೇಶಿಸಿ ಅದ್ಬುತ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.
ಇದೀಗ ಮುಶೀರ್ ಖಾನ್ ರಣಜಿ ಟ್ರೋಫಿ ಫೈನಲ್ ನಲ್ಲಿ ಕ್ರಿಕೆಟ್ ದೇವರೆಂದೇ ಖ್ಯಾತಿಯಾಗಿರುವ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದಿದ್ದಾರೆ. ಅದೂ ಕೂಡ ಸಚಿನ್ ಸ್ಟ್ಯಾಂಡ್‌ನಲ್ಲಿ ಇದ್ದಾಗ ಅವರ ಮುಂದೆಯೇ ಅವರ 29 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ಮುಶೀರ್ ಮುಂಬೈ ಪರ ರಣಜಿ ಟ್ರೋಫಿ ಫೈನಲ್‌ನಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ನಿರ್ಮಿಸಿದರು. ಇದಕ್ಕೂ ಮುನ್ನ ಸಚಿನ್ ಮುಂಬೈ ಪರ 1994-95ರಲ್ಲಿ ಪಂಜಾಬ್ ವಿರುದ್ಧ 21 ವರ್ಷ, 11 ತಿಂಗಳ ವಯಸ್ಸಿನಲ್ಲಿ ವಯಸ್ಸಿನಲ್ಲಿ ಈ ದಾಖಲೆ ಬರೆದಿದ್ದರು.
![](https://risingkannada.com/wp-content/uploads/2024/03/trophyy-1024x1024.png)
ಇದೀಗ ಮುಶೀರ್ ಖಾನ್ 19 ವರ್ಷ ಮತ್ತು 14 ದಿನಗಳಲ್ಲಿ ರಣಜಿ ಟ್ರೋಫಿ ಫೈನಲ್‌ನಲ್ಲಿ ಶತಕ ಗಳಿಸಿದ್ದಾರೆ. ಈ ಮೂಲಕ ರಣಜಿ ಫೈನಲ್‌ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಸಚಿನ್ ತೆಂಡೂಲ್ಕರ್ ಅವರ 29 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.
ಈಗಾಗಲೇ 41 ಬಾರಿ ರಣಜಿ ಟ್ರೋಫಿ ಗೆದ್ದಿರುವ ಮುಂಬೈ ತಂಡ 42ನೇ ಬಾರಿ ಟ್ರೋಫಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ವಿದರ್ಭ ವಿರುದ್ಧದ ರಣಜಿ ಟ್ರೋಫಿ ಫೈನಲ್ ಪಂದ್ಯದ ಮೂರನೇ ದಿನದಂದು ಮುಶೀರ್ ಖಾನ್ ಶತಕ ಮತ್ತು ಶ್ರೇಯಸ್ ಅಯ್ಯರ್ (95) ಮತ್ತು ಅಜಿಂಕ್ಯ ರಹಾನೆ (73) ಅರ್ಧಶತಕದಿಂದ ಮುಂಬೈ ಎರಡನೇ ಇನ್ನಿಂಗ್ಸ್‌ನಲ್ಲಿ 418ರನ್ಗಳ ಬೃಹತ್ ಸ್ಕೋರ್ ಗಳಿಸಿತು. ಒಟ್ಟಾರೆ ವಿದರ್ಭಕ್ಕೆ 538ರನ್ಗಳ ಬೃಹತ್ ಗುರಿ ನೀಡಿದೆ.
ಮುಶೀರ್ ಖಾನ್ ಈ ವರ್ಷದ ರಣಜಿ ಟ್ರೋಫಿಯಲ್ಲಿ ಅಗ್ರ ಫಾರ್ಮ್‌ನಲ್ಲಿದ್ದಾರೆ. ತಮಿಳುನಾಡು ವಿರುದ್ಧದ ಸೆಮಿಫೈನಲ್‌ನಲ್ಲಿ ಅರ್ಧಶತಕ ಗಳಿಸಿದ್ದರು. ಇದಕ್ಕೂ ಮುನ್ನ ಬರೋಡಾ ವಿರುದ್ಧದ ಕ್ವಾರ್ಟರ್ ಫೈನಲ್‌ನಲ್ಲಿ ದ್ವಿಶತಕ ಗಳಿಸಿದ್ದರು. ಕಳೆದ ತಿಂಗಳು ನಡೆದ 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಮುಶೀರ್ ಎರಡು ಶತಕ ಸೇರಿದಂತೆ 360 ರನ್ ಗಳಿಸಿದ್ದರು.
ಇತ್ತ ಟೀಂ ಇಂಡಿಯಾದಿಂದ ಹೊರಬಿದ್ದ ಬಿಸಿಸಿಐ ಕೇಂದ್ರ ಗುತ್ತಿಗೆ ಕಳೆದುಕೊಂಡಿದ್ದ ಶ್ರೇಯಸ್ ಅಯ್ಯರ್ ಮತ್ತೆ ಫಾರ್ಮ್ ಗೆ ಮರಳಿದ್ದಾರೆ. ವಿದರ್ಭ ವಿರುದ್ಧದ ರಣಜಿ ಟ್ರೋಫಿ ಫೈನಲ್‌ನಲ್ಲಿ ಶ್ರೇಯಸ್ 95 ರನ್ಗಳಿಸಿ, ಐದು ರನ್‌ಗಳಿಂದ ಶತಕವಂಚಿತರಾದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?