Connect with us

ಬೆಂಗಳೂರು

ನಾಡಪ್ರಭು ಕೆಂಪೇಗೌಡ ಬಡಾವಣೆ: ಬಿಡಿಎ ಮೇಲ್ಮನವಿ ಎತ್ತಿ ಹಿಡಿದ ಹೈಕೋರ್ಟ್

ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ 12 ಗ್ರಾಮಗಳಲ್ಲಿ ಸುಮಾರು 4,043 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್‌ ಎತ್ತಿಹಿಡಿದಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ 140ಕ್ಕೂ ಹೆಚ್ಚು ಪ್ರತ್ಯೇಕ ಮೇಲ್ಮನವಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠ ಇಂದು ಪ್ರಕಟಿಸಿದೆ.

ಭೂ ಸ್ವಾಧೀನ ಅಧಿಸೂಚನೆಯನ್ನು ರದ್ದುಪಡಿಸಿ 2014ರ ಜುಲೈ 11ರಂದು ಏಕಸದಸ್ಯ ಪೀಠ ನೀಡಿದ್ದ ಆದೇಶ ರದ್ದುಪಡಿಸಬೇಕು ಮತ್ತು ಭೂ ಸ್ವಾಧೀನ ಅಧಿಸೂಚನೆ ಎತ್ತಿಹಿಡಿಯಬೇಕು ಎಂಬ ಬಿಡಿಎ ಕೋರಿಕೆಯನ್ನೂ ವಿಭಾಗೀಯ ಪೀಠ ಮಾನ್ಯ ಮಾಡಿದೆ. ಅಧಿಸೂಚನೆಯಲ್ಲಿ ಸ್ವಾಧೀನಕ್ಕೆ ಗುರುತಿಸಲಾಗಿದ್ದ ಜಾಗದಲ್ಲಿ ನರ್ಸರಿ ಅಭಿವೃದ್ಧಿಯಾಗಿರುವುದು ಹಾಗೂ ಕಟ್ಟಡ ನಿರ್ಮಾಣವಾಗಿರುವುದೂ ಸೇರಿದಂತೆ ಇತರೆ ಕಾರಣಗಳಿಂದ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಬೇಕು ಎಂಬ ಬಗ್ಗೆ ಯಾರದಾದರೂ ಮನವಿ ಇದ್ದರೆ, ಅಂತಹ ಭೂ ಮಾಲೀಕರು ಮೂರು ತಿಂಗಳಲ್ಲಿ ಬಿಡಿಎಗೆ ಮನವಿ ಸಲ್ಲಿಸಬೇಕು. ಬಿಡಿಎ ಆ ಮನವಿಗಳನ್ನು ಕಾನೂನು ಪ್ರಕಾರ ವಿಚಾರಣೆ ನಡೆಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ಪೀಠ ಆದೇಶಿಸಿದೆ.

ಸರ್ಕಾರದಿಂದ ಪೂರ್ವಾನುಮತಿ ಪಡೆಯದೇ ಇರುವುದೂ ಸೇರಿದಂತೆ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ನಿಯಮಗಳ ಪಾಲನೆ ಮಾಡಿಲ್ಲ. ಭೂ ಸ್ವಾಧೀನದಲ್ಲಿ ತಾರತಮ್ಯ ನೀತಿ ಅನುಸರಿಸಲಾಗಿದೆ. ಹೀಗಾಗಿ, ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ ನಡೆಸಿರುವ ಭೂ ಸ್ವಾಧೀನ ಪ್ರಕ್ರಿಯೆ ಕಾನೂನು ಬಾಹಿರವಾಗಿದೆ ಎಂದು ಇದೇ ಹೈಕೋರ್ಟ್‌ನ ಏಕಸದಸ್ಯ ಪೀಠ ತೀರ್ಮಾನಿಸಿತ್ತು. ಭೂ ಸ್ವಾಧೀನಕ್ಕೆ ಹೊರಡಿಸಿದ್ದ ಪ್ರಾಥಮಿಕ ಹಾಗೂ ಅಂತಿಮ ಅಧಿಸೂಚನೆಯನ್ನು ರದ್ದುಪಡಿಸಿ 2014ರ ಜುಲೈ 11ರಂದು ಆದೇಶಿಸಿತ್ತು. ಇದೀಗ ಈ ತೀರ್ಪನ್ನು ರದ್ದುಪಡಿಸಿರುವ ವಿಭಾಗೀಯ ಪೀಠವು ಭೂ ಸ್ವಾಧೀನ ಅಧಿಸೂಚನೆಯನ್ನು ಪುರಸ್ಕರಿಸಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ