Featured
ನೇಪಾಳ ಪ್ರವಾಹ – 150ರ ಗಡಿಯಲ್ಲಿ ಮೃತರ ಸಂಖ್ಯೆ – 50ಕ್ಕೂ ಅಧಿಕ ಜನ ನಾಪತ್ತೆ..!
![](https://risingkannada.com/wp-content/uploads/2020/07/nepal-flood-2.jpg)
ರೈಸಿಂಗ್ ಕನ್ನಡ :
ಕಠ್ಮಂಡು, ನೇಪಾಳ :
ನೇಪಾಳದ ಪಶ್ಚಿಮ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದ್ದು, 132 ಮಂದಿ ಸಾವಿಗೀಡಾಗಿದ್ದು, 53 ಜನ ನಾಪತ್ತೆಯಾಗಿದ್ದಾರೆ.
![](https://risingkannada.com/wp-content/uploads/2020/07/ASTIN-BAND-17-1024x255.jpg)
ಪ್ರವಾಹದಲ್ಲಿ ಸಿಲುಕಿ 128 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲವೆಡೆ ಮನೆಯಗಳು ಕೊಚ್ಚಿಹೋಗಿವೆ. 998 ಕುಟುಂಬಗಳು ಅತಂತ್ರ ಪರಿಸ್ಥಿತಿಯಲ್ಲಿವೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಭೂ ಕುಸಿತದಿಂದಾಗಿ ಪಶ್ಚಿಮ ನೇಪಾಳದ ಪೃಥ್ವಿ, ಸಿದ್ಧಾರ್ಥ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸ್ಥಳೀಯರ ಸಹಾಯದಿಂದ ನೇಪಾಳ ಪೊಲೀಸರು ಮತ್ತು ನೇಪಾಳ ಸೇನಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತುರ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಗಳನ್ನೂ ನಡೆಸಲು ಹತ್ತು ಸೇನಾ ಹೆಲಿಕಾಪ್ಟರ್‌ಗಳನ್ನು ಕಠ್ಮಂಡು, ಪೋಖರಾ, ಸಾರಂಗ್‌ಕೋಟ್‌ನಲ್ಲಿ ನಿಯೋಜಿಸಲಾಗಿದೆ. ಭೂಕುಸಿತ ಮತ್ತು ಪ್ರವಾಹದಿಂದಾಗಿ ಇಪ್ಪತ್ತು ಜಿಲ್ಲೆಗಳಲ್ಲಿ ಹಾನಿ ಉಂಟಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?