Featured
ತೀವ್ರ ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ ನೂತನ ಕೃಷಿ ಮಸೂದೆ ಮಂಡಿಸಿದ ಕೇಂದ್ರ ಸರ್ಕಾರ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ತೀವ್ರ ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಭಾನುವಾರ ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಮಂಡನೆ ಮಾಡಿದ್ದಾರೆ.
ಮಸೂದೆ ಮಂಡನೆ ವೇಳೆ ಸಚಿವ ತೋಮರ್ ಎರಡು ಮಸೂದೆಗಳು ಐತಿಹಾಸಿಕವಾಗಿದ್ದು ರೈತರು ತಮ್ಮ ಉತ್ಪನ್ನಗಳನ್ನ ಮುಕ್ತವಾಗಿ ಈ ಮಸೂದೆಯಿಂದ ವ್ಯಾಪಾರ ಮಾಡಬಹುದಾಗಿದೆ. ಈ ಮಸೂದೆ ರೈತರ ಬದುಕಲ್ಲಿ ಬದಲಾವಣೆ ತರಲಿದೆ ಎಂದರು. ಮಂಡಿಸಿರುವ ಮಸೂದೆ ಕನಿಷ್ಟ ಬೆಂಬಲ ಬೆಲೆಗೆ ಸಂಬಂಧಿಸಿಲ್ಲ ಎಂದು ಇದೇ ವೇಳೆ ಸ್ಪಷ್ಟನೆ ನೀಡಿದ್ದಾರೆ.
ರೈತರು ಮತ್ತು ಬೆಳೆಗಳ ವ್ಯಾಪಾರ, ವಾಣಿಜ್ಯ (ಪ್ರಚಾರ,ಸೌಲಭ್ಯ) ಮಸೂದೆ, 2020 ರೈತರು (ಸಬಲೀಕರಣ ಮತ್ತು ಸಂರಕ್ಷಣೆ ಬೆಲೆ ಭರವಸೆ ಮತ್ತು ಕೃಷಿ ಸೇವೆ ಮಸೂದೆಯನ್ನ ಸಚಿವರು ಮಂಡಿಸಿದರು.
ಈ ಮಸೂದೆ ರೈತರ ಬೆಳೆಗಳ ವ್ಯಾಪಾರ ಮತ್ತು ವಾಣಿಜ್ಯ ಮಸೂದೆ,ಎಲೆಕ್ಟ್ರಾನಿಕ್ಸ್ ವ್ಯಾಪಾರಗಳ ವಹಿವಾಟಿಗೆ ಅನುಮತಿ ಮತ್ತು ಕೃಷಿ ಉತ್ಪನ್ನಗಳ ಮೇಲೆ ನೇರ ಆನ್ಲೈನ್ ಖರೀದಿ ಮತ್ತು ಮಾರಾಟಕ್ಕೆ ವಹಿವಾಟಿಗೆ ವೇದಿಕೆಯನ್ನ ನೀಡಲಿದೆ ಎಂದು ಸಚಿವ ತೋಮರ್ ವಿವರಿಸಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















