Featured
ನೂತನ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಕೊರೊನಾಗೆ ಬಲಿ: ಉಸಿರಾಟದ ಸಮಸ್ಯೆಯಿಂದ ಬಳಲಿದ್ದ ಬಿಜೆಪಿ ನಾಯಕ

ರೈಸಿಂಗ್ ಕನ್ನಡ :
ಬೆಂಗಳೂರು:
ಕೊರೊನಾ ಸೋಕಿಗೆ ಗುರಿಯಾಗಿ ತೀವ್ರವಾಗಿ ಬಳಲಿದ್ದ ಬಿಜೆಪಿಯ ನೂತನ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕಳೆದ 15 ದಿನಗಳ ಹಿಂದೆಯಷ್ಟೆ ಸೋಂಕಿಗೆ ಗುರಿಯಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ತೀವ್ರ ಉಸಿರಾಟದ ಸಮಸ್ಯೆಗೆ ಸಿಲುಕಿ ಸಾವನಪ್ಪಿದ್ದಾರೆ.
ಮೊನ್ನೆ ಜೂನ್ನಲ್ಲಿ ಈರಣ್ಣ ಕಡಾಡಿ ಜೊತೆ ಅಶೋಕ್ ಗಸ್ತಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಬಿಜೆಪಿಯ ನಾಯಕನಾಗಿ ಗುರುತಿಸಿಕೊಂಡಿದ್ದ ಅಶೋಕ ಗಸ್ತಿ ಮೂರು ದಶಕಗಳ ಕಾಲ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. 1990ರಲ್ಲಿ ಬಿಜೆಪಿ ಪಕ್ಷಕ್ಕಾಗಿ ದುಡಿದರು. ರಾಯಚೂರು ಮತ್ತು ಬಳ್ಳಾರಿಯಲ್ಲಿ ಪಕ್ಷದ ಸಂಘಟನಾ ನಾಯಕರಾಗಿದ್ದರು.
2001ರಲ್ಲಿ ರಾಯಚೂರು ನಗರ ಸಭೆಗೆ ಆಯ್ಕೆಯಾದರು. 2012ರಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?