Featured
ಭಾರತದ ಭವಿಷ್ಯದ ಕೃಷಿ ಹೇಗಾಗಬೇಕು ಅನ್ನೋದನ್ನ ಸೂಕ್ಷ್ಮವಾಗಿ ತಿಳಿಸಿದ ನಿಖಿಲ್ ಕುಮಾರಸ್ವಾಮಿ – ಮಣ್ಣಿನ ಮಗನ ಮನದಾಳ..!
ರೈಸಿಂಗ್ ಕನ್ನಡ :
ನಿಖಿಲ್ ಕುಮಾರಸ್ವಾಮಿ ಫೇಸ್‌ಬುಕ್‌ನಿಂದ :
ಇತ್ತೀಚಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ತುಂಬಾನೆ ಡಿಫ್ರೆಂಟ್ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ. ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೆ ಮಾಜಿ ಮುಖ್ಯಮಂತ್ರಿಗಳ ಮಗ ಅನ್ನೋ ಇಮೇಜ್ ಒಂದೆಡೆಯಾದ್ರೆ, ಸ್ಯಾಂಡಲ್‌ವುಡ್‌ನಲ್ಲೂ ಸದ್ದು ಮಾಡಿರೋ ಇವರು, ಇದೀಗ ತಮ್ಮ ಕುಟುಂಬದ ಮೂಲ ವೃತ್ತಿ ಕೃಷಿಕಡೆ ಮುಖಮಾಡಿದ್ದಾರೆ.
ನಾನು ಸಹಾ ರೈತನ ಮಗನಾಗಿದ್ದು ನಮ್ಮ ಜಮೀನಿನಲ್ಲಿ ವ್ಯವಸಾಯ ನಡೆಸಬೇಕೆಂದು ನಿರ್ಧರಿಸಿ ನಮ್ಮ ತೋಟದಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದೇನೆ. ಇದೇ ರೀತಿ ನಗರದಿಂದ ಹಳ್ಳಿಗಳಿಗೆ ಹಿಂತಿರುಗಿ ವ್ಯವಸಾಯದಲ್ಲಿ ತೊಡಗಿರುವ ಎಲ್ಲಾ ರೈತರ ಮಕ್ಕಳಿಗೂ ಯಶಸ್ಸು ಸಿಗಲಿ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.
ಅಲ್ಲದೇ ಕೃಷಿ ಪ್ರಧಾನ ರಾಷ್ಟ್ರವಾದ ಭಾರತದಲ್ಲಿ ಪ್ರಸ್ತುತ ಕೃಷಿ ಚಟುವಟಿಕೆ ಯಾವ ಪರಿಸ್ಥಿತಿಯಲ್ಲಿದೆ ಅನ್ನೋದನ್ನ ಸೂಕ್ಷ್ಮವಾಗಿ ಬದೆದಿದ್ದಾರೆ. ನಮ್ಮ ದೇಶ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತ ಈ ದೇಶದ ಬೆನ್ನೆಲುಬು ಎಂದು ಗೌರವ ಸಲ್ಲಿಸುತ್ತೇವೆ. ಆದರೆ ರೈತರ ಮಕ್ಕಳು ರೈತರಾಗಿ ಅವರ ಕೃಷಿಭೂಮಿಯಲ್ಲಿ ದುಡಿಯಲು ಹಿಂಜರಿದು ನಗರದ ಕಡೆಗೆ ವಲಸೆ ಬಂದು ಬದುಕು ಕಟ್ಟಿಕೊಳ್ಳಲು ಹವಣಿಸುವವರ ಸಂಖ್ಯೆಯೇ ಹೆಚ್ಚು. ತಾವು ಕಲಿತ ವಿದ್ಯಾಭ್ಯಾಸದ ಆಧಾರದ ಮೇಲೆ ನಗರಗಳಲ್ಲಿ ಕೆಲಸವೊಂದನ್ನು ಸಂಪಾದಿಸಿ ಜೀವನ ನಡೆಸುವವರು ಒಂದು ಕಡೆಯಾದರೆ ಇನ್ನು ಕೆಲವರು ಸ್ವಂತ ಉದ್ಯೋಗ ಅಥವಾ ಕೂಲಿ ಕೆಲಸವನ್ನಾದರೂ ನಗರದಲ್ಲಿ ಮಾಡಿಕೊಂಡು ಜೀವನ ನಡೆಸಲು ನಗರಗಳ ಕಡೆಗೆ ಮುಖಮಾಡುವವರು ಇನ್ನೊಂದು ಕಡೆ. ಇದರ ಪರಿಣಾಮವಾಗಿ ಹಳ್ಳಿಗಳಲ್ಲಿರುವ ಕೃಷಿಭೂಮಿಗಳು ಪಾಲು ಬೀಳುತ್ತಿವೆ. ನಗರದಲ್ಲಿ ವೃತ್ತಿ ಸ್ಪರ್ಧೆ ತಾರಕಕ್ಕೇರಿದೆ.
ಡಾಕ್ಟರ್ ತನ್ನ ಮಗ ಡಾಕ್ಟರ್ ಆಗಲಿ, ಪೊಲೀಸ್ ತನ್ನ ಮಗನೂ ತನ್ನಂತೆಯೇ ಪೊಲೀಸ್ ಆಗಲಿ ಸರ್ಕಾರಿ ನೌಕರ ತನ್ನ ಮಗನೂ ಸರ್ಕಾರಿ ನೌಕರನಾಗಲಿ ಎಂದು ಆಸೆ ಪಡುತ್ತಾನೆ. ಆದರೆ ನಮ್ಮ ದೇಶದ ರೈತ ತನ್ನ ಮಗನೂ ರೈತನಾಗಲಿ ಎಂದು ಎಂದೂ ಬಯಸದ ಪರಿಸ್ಥಿತಿ ಇದೆ. ತಾನು ಪಟ್ಟ ಕಷ್ಟ ತನಗೇ ಕೊನೆಯಾಗಲಿ ನನ್ನ ಮಕ್ಕಳಿಗೆ ಈ ಕಷ್ಟ ಬೇಡ ಎಂದು ಸಾಲ ಮಾಡಿಯಾದರೂ ಮಕ್ಕಳನ್ನು ಓದಿಸಿ ಉದ್ಯೋಗಕ್ಕಾಗಿ ನಗರಗಳಿಗೆ ಕಳುಹಿಸುತ್ತಾರೆ. ರೈತರಿಗೆ ತಾವು ಏನೇ ಬೆಳೆದರೂ ಅದಕ್ಕೆ ಬೆಲೆ ನಿಗದಿ ಮಾಡುವ ಅಧಿಕಾರವೂ ಆತನಿಗಿಲ್ಲ. ಜೀವಮಾನವಿಡೀ ದುಡಿದು ಬದುಕುವ ರೈತನಿಗೆ ಈ ದೇಶದ ಮೊದಲ ಗೌರವ ಸಿಗಬೇಕಿದ್ದು ಸರ್ಕಾರಿ ಅಧಿಕಾರಿಗಳು ಹಾಗೂ ಬ್ಯಾಂಕ್ ನೌಕರರು ರೈತರು ತಮ್ಮ ಕಚೇರಿಗೆ ಬಂದಾಗ ಗೌರವದಿಂದ ನಡೆಸಿಕೊಳ್ಳಬೇಕು ಎಂದು ಬರೆದಿದ್ದಾರೆ ನಿಖಿಲ್.
ಜಮೀನಿನಲ್ಲಿ ಮುಳ್ಳು ಚುಚ್ಚಿ ಮಣ್ಣಿಗೆ ರಕ್ತದ ಅಭಿಷೇಕವಾದರೂ ಮರುದಿನ ಅದೇ ಜಮೀನಿನಲ್ಲಿ ಕೆಲಸ ಮಾಡುವ ರೈತನಿಗೆ ಘನತೆಯ ಬದುಕನ್ನು ಕಟ್ಟಿ ಕೊಡಬೇಕಿದೆ. ರೈತರ ಮಕ್ಕಳು ಕೃಷಿಭೂಮಿಯಲ್ಲಿ ಕೆಲಸ ಮಾಡುವುದು ಒಂದು ಗೌರವ ಅನ್ನುವ ಪರಿಸ್ಥಿತಿ ನಿರ್ಮಾಣವಾಗಬೇಕು.ರೈತನಾಗಿ ಬದುಕುವುದು ದೌರ್ಭಾಗ್ಯವಲ್ಲ ಬದಲಾಗಿ ಅದೊಂದು ಸೌಭಾಗ್ಯ ಅನ್ನುವ ಪರಿಸ್ಥಿತಿ ನಿರ್ಮಾಣವಾಗಬೇಕು.
ನಗರದಿಂದ ಮತ್ತೆ ಊರುಗಳಿಗೆ ಹಿಂದಿರುಗಿ ತಮ್ಮ ತಮ್ಮ ಕೃಷಿಭೂಮಿಗಳಲ್ಲಿ ಕೃಷಿ ಚಟುವಟಿಕೆಗಳನ್ನು ಆರಂಭಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ನಿಮಗೆಲ್ಲರಿಗೂ ಯಶಸ್ಸು ಸಿಗಲಿ. ರೈತನ ಮಗನೆಂದು ಹೆಮ್ಮೆಯಿಂದ ಹೇಳಿ. ವಿದ್ಯಾಭ್ಯಾಸವಿರುವ ಯುವಕರು ವ್ಯವಸಾಯಕ್ಕಾಗಿ ಜಮೀನಿಗಿಳಿದರೆ ಮಧ್ಯವರ್ತಿಗಳ ಮೋಸವೂ ಕಡಿಮೆಯಾಗಲಿದೆ. ಆಧುನಿಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಬಳಸಿಕೊಳ್ಳುವ ಅವಕಾಶವಿದೆ. ಕೃಷಿಯಲ್ಲೆ ಉನ್ನತ ಪದವಿ ಪಡೆದ ರೈತರ ಮಕ್ಕಳೇ ದೇಶದ ಕೃಷಿನೀತಿಯನ್ನು ನಿರ್ಧರಿಸುವಂತಾಗಲಿ. ಇದರ ಜೊತೆಗೆ ಸರ್ಕಾರಗಳು ಸಹಾ ಕೃಷಿ ಚಟುವಟಿಕೆಗಳಿಗೆ ಸೂಕ್ತ ಪ್ರೋತ್ಸಾಹವನ್ನು ನೀಡಿದರೆ ದೇಶದಲ್ಲಿ ರೈತನೆಂದರೆ ಎದ್ದು ಕೈಮುಗಿಯುವ ದಿನಗಳು ದೂರವಿಲ್ಲ ಅನ್ನೋ ಸಾಲುಗಳಿಂದ ನಿಜಕ್ಕೂ ಪ್ರತಿಯೊಬ್ಬ ರೈತರು ಹೆಮ್ಮೆ ಪಡೋ ಸಂಗತಿಯಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?