Connect with us

ದೇಶ-ವಿದೇಶ

ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ, ಕೂಗಿದ್ದರೆ ಪೊಲೀಸರು ಕ್ರಮ ತಗೋತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹಿಮಾಚಲ ಪ್ರದೇಶಕ್ಕೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ನಿನ್ನೆ ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ ಅವರು ಹೇಳಿದ್ದಿಷ್ಟು;

“ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಇದನ್ನು ತಿರುಚುತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ. ಈ ವಿಚಾರವಾಗಿ ತನಿಖೆ ಮಾಡುವಂತೆ ನಾವು ಸೂಚಿಸಿದ್ದೇವೆ. ತನಿಖೆ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಸುಳ್ಳು ಹಬ್ಬಿಸಿದ್ದರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.”

ಹಿಮಾಚಲ ಪ್ರದೇಶಕ್ಕೆ ವೀಕ್ಷರಾಗಿ ತೆರಳುತ್ತಿರುವ ಬಗ್ಗೆ ಕೇಳಿದಾಗ, “ನಾನು ಅಲ್ಲಿಗೆ ಹೋಗುವ ಬಗ್ಗೆ ಕಾಂಗ್ರೆಸ್ ಪಕ್ಷ ನನಗೆ ಸೂಚನೆ ನೀಡಿದ್ದು, ಅದರಂತೆ ತೆರಳುತ್ತಿದ್ದೇನೆ. ಎರಡು ಮೂರು ರಾಜ್ಯಗಳಲ್ಲಿ ಸರ್ಕಾರ ಕೆಡವಲು ಬಿಜೆಪಿ ಆತುರದಲ್ಲಿದೆ. ಪ್ರಜಾಪ್ರಭುತ್ವದಲ್ಲಿ ಬಲಿಷ್ಠ ವಿರೋಧ ಪಕ್ಷ ಇರಬೇಕು. ಈ ದೇಶದಲ್ಲಿ ಕೆಟ್ಟ ಸಂಪ್ರದಾಯವನ್ನು ಬಿಜೆಪಿ ಪಾಲಿಸುತ್ತದೆ. ನಮ್ಮ ಪಕ್ಷದ ಎಲ್ಲಾ ಶಾಸಕರು ನಮ್ಮ ಜತೆಯೇ ಇರುತ್ತಾರೆ. ಪಕ್ಷಕ್ಕೆ ನಿಷ್ಠರಾಗಿ ಇರುತ್ತಾರೆ ಎಂಬ ನಂಬಿಕೆ ನನಗಿದೆ” ಎಂದು ತಿಳಿಸಿದರು.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ