Connect with us

Featured

ಸಧ್ಯಕ್ಕಿಲ್ಲ ಶಾಲೆ ತೆರೆಯೋ ಚಿಂತನೆ : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ರೈಸಿಂಗ್ ಕನ್ನಡ :

ಬೆಂಗಳೂರು :

ಕೊರೊನಾ ಸಾಂಕ್ರಾಮಿಕ ಪ್ರಸರಣದ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ ಸಾಮಾಜಿಕ ಸಂದರ್ಭದಲ್ಲಿ ಆನ್‍ಲೈನ್ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ಸಂವಾದದಲ್ಲಿ ಮಾತನಾಡಿ, ಈ ಸಾಮಾಜಿಕ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲವಾದರೂ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ಎಲ್ಲ ಆಯಾಮಗಳಿಂದಲೂ ಪ್ರಯತ್ನ ಮಾಡಲಾಗುತ್ತದೆ ಎಂದರು.

Advertisement

ಇಂತಹ ಪರಿಸ್ಥಿತಿ ಇದೇ ಮೊದಲ ಬಾರಿ ಬಂದೆರಗಿರುವುದರಿಂದ ಆ ನಿಟ್ಟಿನಲ್ಲಿ ಮಕ್ಕಳನ್ನು ತಲುಪಲು ಸಾಧ್ಯವಾಗಬಹುದಾದ ಎಲ್ಲ ಪ್ರಯತ್ನಗಳನ್ನು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿಸಿದರು.

ವಠಾರ ಶಾಲೆ, ಪಡಸಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಖಾಸಗಿ ವಾಹಿನಿ, ಶಿಕ್ಷಣ ಇಲಾಖೆಯ ಚಾನೆಲ್ ಸೇರಿದಂತೆ ಲಭ್ಯವಾಗಬಹುದಾದ ಎಲ್ಲ ಅವಕಾಶವನ್ನೂ ಮುಕ್ತವಾಗಿರಿಸಿಕೊಂಡು ಶಿಕ್ಷಣ ಇಲಾಖೆ ಎಲ್ಲ ಉಪಕ್ರಮಗಳತ್ತಲೂ ಮಕ್ಕಳ ಹಿತದೃಷ್ಟಿಯಿಂದ ಯೋಚಿಸುತ್ತಿದೆ ಎಂದು ಮಾಹಿತಿ ನೀಡಿದರು.

ಈ ಎಲ್ಲ ಸಾಮೂಹಿಕವಾದ ಪ್ರಯತ್ನಗಳು ಗಟ್ಟಿರೂಪ ಪಡೆದು ವಿಕೇಂದ್ರಿಕೃತ ಕಲಿಕೆಯು ಮಕ್ಕಳಿಗೆ ಉಪಯುಕ್ತವಾಗುವ ರೀತಿಯಲ್ಲಿ ನಮ್ಮ ಪ್ರಯತ್ನಗಳು ಇರಬೇಕೆನ್ನುವ ಅಭಿಪ್ರಾಯಗಳು ನಾವು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬಹುದಾದ ನಿರ್ಣಯಗಳಿಗೆ ಒಂದು ಸ್ಪಷ್ಟ ದಿಕ್ಕನ್ನು ಮೂಡಿಸಿವೆ. ಈ ಎಲ್ಲ ಸಲಹೆಗಳನ್ನು ಕ್ರೂಢೀಕರಿಸಿ ದಾಖಲಿಸಿ ಆಯಾ ಸಂದರ್ಭ, ಆಯಾ ಪ್ರದೇಶಕ್ಕನುಗುಣವಾಗಿ ಜಾರಿಯಲ್ಲಿಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಸುರೇಶ್‍ಕುಮಾರ್ ಅಭಿಪ್ರಾಯಪಟ್ಟರು.

ಎಲ್ಲ ರೀತಿಯ ಸಾಧ್ಯತೆಗಳನ್ನು ಕ್ರೋಢೀಕರಿಸಿಕೊಂಡು ಅವಕಾಶವಾಗುವ ಯಾವುದೇ ಸೌಲಭ್ಯದ ಮೂಲಕವಾಗಲಿ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸರ್ಕಾರ ಮುಂದಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಸಂವಾದದಲ್ಲಿಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ಹಿರಿಯ ಶಿಕ್ಷಣ ತಜ್ಞರಾದ ಎಂ.ಕೆ. ಶ್ರೀಧರ್, ಡಾ. ಗುರುರಾಜ ಕರ್ಜಗಿ, ಡಾ. ವಿ.ಪಿ. ನಿರಂಜನಾರಾಧ್ಯ, ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ.ಜಗದೀಶ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾಧಿಕಾರಿ ದೀಪಾ ಚೋಳನ್ ಭಾಗವಹಿಸಿದ್ದರು.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ