Connect with us

Featured

ಜುಲೈ ಮೊದಲವಾರದಲ್ಲಿ ಬರಲಿದೆ “ರಿಚ್ಚಿ”ಯ ಮತ್ತೊಂದು ಹಾಡು.

ರೈಸಿಂಗ್ ಕನ್ನಡ :-ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ರಿಚ್ಚಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರತಂಡ ಹಾಡುಗಳ ಬಿಡುಗಡೆ ಮಾಡುತ್ತಿದೆ. ಇತ್ತೀಚೆಗೆ “ರಿಚ್ಚಿ” ಚಿತ್ರಕ್ಕಾಗಿ ಕುನಾಲ್ ಗಾಂಜಾವಾಲ ಅವರು ಬಹಳ ವರ್ಷಗಳ ನಂತರ ಹಾಡಿರುವ ಹಾಡೊಂದು ಬಿಡುಗಡೆಯಾಗಿ, ಎಲ್ಲರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಚಿತ್ರದ ಮತ್ತೊಂದು ಹಾಡು ಜುಲೈ ಮೊದಲವಾರದಲ್ಲಿ ಬಿಡುಗಡೆಯಾಗಲಿದೆ. ವಿನೋದ್ ಅವರು ಈ‌ ಹಾಡನ್ನು ಬರೆದಿದ್ದು, ಹೆಸರಾಂತ ಗಾಯಕಿ ಅಂಕಿತ ಕುಂಡು ಹಾಡಿದ್ದಾರೆ. ಅಗಸ್ತ್ಯ ಸಂತೋಷ್ ಸಂಗೀತ ನೀಡಿದ್ಧಾರೆ. A2 music ಮೂಲಕ ಈ ಹಾಡು ಬಿಡುಗಡೆಯಾಗಲಿದೆ.

“ರಿಚ್ಚಿ” ಇದು ಸಿನಿಮಾ‌ ಹೆಸರು ಮಾತ್ರವಲ್ಲ. ನಿರ್ದೇಶಕ ಹಾಗೂ ನಾಯಕನ ಹೆಸರು ಕೂಡ. ಹೌದು ತಮ್ಮ ಹೆಸರನ್ನೇ ಚಿತ್ರದ ಶೀರ್ಷಿಕೆಯಾಗಿಸಿದ್ದಾರೆ ರಿಚ್ಚಿ. ಚಿತ್ರದ ನಿರ್ಮಾಪಕರೂ ಇವರೆ.‌ ರಾಕೇಶ್ ರಾವ್ ಹಾಗೂ ವೆಂಕಟಾಚಲಯ್ಯ “ರಿಚ್ಚಿ” ಚಿತ್ರದ ಸಹ ನಿರ್ಮಾಪಕರು. ಅಣಜಿ ನಾಗರಾಜ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ.

ಲವ್ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ‌ಕಥಾಹಂದರ ಹೊಂದಿರುವ ಈ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ “ರಿಚ್ಚಿ” ನಿರ್ಮಾಣವಾಗಿದೆ. ಅಗಸ್ತ್ಯ ಸಂತೋಷ್ ಅವರು ಸಂಗೀತ ನೀಡಿರುವ ನಾಲ್ಕು ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ಸೋನು ನಿಗಮ್, ಕುನಾಲ್ ಗಾಂಜಾವಾಲ ಹಾಗೂ ಅಂಕಿತ ಕುಂಡು ಹಾಡುಗಳನ್ನು ಹಾಡಿದ್ದಾರೆ. ಗೌಸ್ ಫಿರ್, ಆನಂದ್ ಹಾಗೂ ವಿನೋದ್ ಹಾಡುಗಳನ್ನು ಬರೆದಿದ್ದಾರೆ. ಹಿಂದಿ ಭಾಷೆಯಲ್ಲಿ ಈ ಚಿತ್ರದ ಹಾಡುಗಳನ್ನು ಜಾವೇದ್ ಅಲಿ, ಪಲಾಕ್ ಮುಚ್ಚಲ್ ಹಾಗೂ ಕುನಾಲ್ ಗಾಂಜಾವಾಲ ಹಾಡಿದ್ದಾರೆ.

ಅಜಿತ್ ಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಚಿನ್ನಿಪ್ರಕಾಶ್, ಧನಂಜಯ ಹಾಗೂ ಭೂಷಣ್ ನೃತ್ಯ ನಿರ್ದೇಶನ ಹಾಗೂ ವಿಕ್ರಮ್ ಮೋರ್, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ‌ ಈ ಚಿತ್ರಕ್ಕಿದೆ.

“ರಿಚ್ಚಿ” ಅವರಿಗೆ ನಾಯಕಿಯಾಗಿ “ಕನ್ನಡತಿ” ಧಾರಾವಾಹಿ ಖ್ಯಾತಿಯ ರಮೋಲ ಅಭಿನಯಿಸಿದ್ದಾರೆ. ಮನೋಜ್, ಮಿಮಿಕ್ರಿ ಗೋಪಿ, “ಮಜಾಭಾರತ” ಚಂದ್ರಪ್ರಭ, “ಕಾಮಿಡಿ ಕಿಲಾಡಿಗಳು” ರಾಘವೇಂದ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ