Featured
ಚಳಿಗಾಲದಲ್ಲೂ ಗಡಿ ಕಾಯುತ್ತೇವೆ… ಸಂಸದೀಯ ಸಮಿತಿಗೆ ಸೇನೆಯಿಂದ ಸ್ಪಷ್ಟನೆ..!

ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಚೀನಾ ಮತ್ತು ಭಾರತ ಗಡಿ ನಡುವೆ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಲಡಾಖ್ ಭಾಗದಲ್ಲಿ ಚೀನಾ ಗಡಿ ಕ್ಯಾತೆ ತೆಗೆದಿದೆ. ಹೀಗಾಗಿ ಭಾರತೀಯ ಸೇನೆ, ಗಡಿ ಸುರಕ್ಷತೆಗಾಗಿ ನಾವು ಸಂಪೂರ್ಣ ಸಜ್ಜಾಗಿದ್ದೇವೆ ಎಂದು ಸಂಸದೀಯ ಸಮಿತಿಗೆ ಮಾಹಿತಿ ನೀಡಿದೆ.

ಈ ಬಾರಿಯ ಚಳಿಗಾಲದಲ್ಲಿ ಲಡಾಖ್ ಗಡಿಯಿಂದ ಸೇನೆಯನ್ನು ಹಿಂಪಡೆಯುವುದಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ. ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ(ಸಿಡಿಎಸ್) ಬಿಪಿನ್ ರಾವತ್ ನೇತೃತ್ವದಲ್ಲಿ ಲಡಾಖ್ ಗಡಿಯಲ್ಲಿನ ಸಿದ್ಧತೆ ಕುರಿತು ಸಂಸದೀಯ ಸಮಿತಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಲಡಾಖ್ ಗಡಿಭಾಗದಲ್ಲಿ ಚಳಿಗಾಲದಲ್ಲಿ ಗಡಿ ಕಾಯುವುದು ಸುಲಭದ ಮಾತಲ್ಲ. ಇದಕ್ಕಾಗಿ ಸೇನೆ ಈಗಾಗಲೇ ಸೈನಿಕರಿಗೆ ಅಗತ್ಯ ಸಲಕರಣೆಗಳನ್ನು ಪೂರೈಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇನ್ನು ಗಡಿಭಾಗದಲ್ಲಿ ಚೀನಿ ಸೈನಿಕರು ಕೂಡ ಬೀಡು ಬಿಟ್ಟಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರೂ ಗಡಿ ಕಾಯಲಿದ್ದಾರೆ ಎಂದು ಸಂಸದೀಯ ಸಮಿತಿಗೆ ಭಾರತೀಯ ಸೇನೆ ಭರವಸೆ ನೀಡಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















