Featured
ಕೊರೊನಾಕ್ಕೆ ಮದ್ದು ಅರೆದ ಈಶ್ವರಪ್ಪ- ಮಲೆನಾಡಿನಲ್ಲಿ ಕೋವಿಡ್ ಕಡಿವಾಣಕ್ಕೆ ಹೊಸ ಸೂತ್ರ..!
ರೈಸಿಂಗ್ ಕನ್ನಡ:
ಶಿವಮೊಗ್ಗ:
ಕರೋನಾ ನಿಯಂತ್ರಣದ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಿಂದ ಮುಂದಿನ ಆದೇಶದವರೆಗೆ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಈಶ್ವರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ.
ಪೆಟ್ರೋಲ್ ಬಂಕ್‍ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು. ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ಒದಗಿಸುವುದು ಮಾಲಿಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಹಬ್ಬ ಹರಿದಿನಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸೂಚಿಸಲಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.
ಶಿವಮೊಗ್ಗ ಸಂಸದ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ಮೇಯರ್ ಸುವರ್ಣಾ ಶಂಕರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಉಪಸ್ಥಿತರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?