Connect with us

Featured

ಗುರು ಹಾದಿಯಲ್ಲಿ ಶಿಷ್ಯರ ಹೆಜ್ಜೆ: ದಲಿತ ಕೇರಿಗೆ ಪೇಜಾವರ ಶ್ರೀ ಭೇಟಿ

ರೈಸಿಂಗ್ ಕನ್ನಡ:

ನ್ಯೂಸ್​ ಡೆಸ್ಕ್​:

ಹಿಂದೂ ಸಮಾಜದಲ್ಲಿದ್ದ ಅಸೃಶ್ಯತೆಯನ್ನು ನಿವಾರಿಸಿ ಸಶಕ್ತ ಸುದೃಢಗೊಳಿಸುವ ನಿಮಿತ್ತ ದೇಶದ ಹಲವೆಡೆ ದಲಿತರ ಕಾಲೊನಿಗಳಿಗೆ ಭೇಟಿ ನೀಡಿ ಕ್ರಾಂತಿಕಾರ್ಯ ನಡೆಸಿ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಂಚಲನ ಮೂಡಿಸಿದ್ದರು.

ಇದೀಗ ಅವರ ಶಿಷ್ಯ ಶ್ರೀ ವಿಶ್ವಪ್ರಸನ್ನ ತೀರ್ಥರೂ ಗುರುಗಿನ ದಾರಿಯಲ್ಲಿ ಹೆಜ್ಜೆ ಹಾಕುವ ಮಹತ್ವದ ನಿರ್ಧಾರ ಕೈಗೊಂಡಿದ್ದು  ಭಾನುವಾರ ಉಡುಪಿಯ ಕೊಡವೂರು ಗ್ರಾಮದ ಪಾಳೆಕಟ್ಟೆ ಎಂಬಲ್ಲಿ ಪರಿಶಿಷ್ಟರ ಬಡಾವಣೆಗೆ ತಮ್ಮ ಮೊದಲ ಭೇಟಿ ನೀಡಿ ಹಿಂದೂ ಸಮಾಜ ಸಂಘಟನೆಗೆ ತಾವೂ ಸಿದ್ಧ ಎಂದಿದ್ದಾರೆ .

Advertisement

ಅಯೋಧ್ಯೆ ರಾಮ ಮಂದಿರ ನಿರ್ಮಾಣವನ್ನು ಮುಂದಿಟ್ಟುಕೊಂಡು ಮತ್ತೊಮ್ಮೆ ಭಾರತದಲ್ಲಿ ಹಿಂದೂ ಸಮಾಜವನ್ನು ಸಂಘಟನಾತ್ಮಕವಾಗಿ ಸಶಕ್ತ ಮತ್ತು ಸುದೃಢಗೊಳಿಸಬೇಕಾಗಿದೆ . ಈ ಆಶಯದೊಂದಿಗೆ ಸುಮಾರು 120 ಮನೆಗಳನ್ನು ಹೊಂದಿರುವ ಈ ಬಡಾವಣೆಗೆ ಭೇಟಿ ನೀಡಿ 400 ರಷ್ಟು ದಲಿತ ಬಂಧುಗಳಲ್ಲಿ ಹಿಂದವಃ ಸೋದರಾ ಸರ್ವೇ ಎಂಬ ಗುರು ವಿಶ್ವೇಶತೀರ್ಥ ಸಂದೇಶದಂತೆ ವಿಶ್ವಾಸ ತುಂಬಿದರು .

ಶ್ರೀಗಳು ಆಗಮಿಸುವ ಬಗ್ಗೆ ಸ್ಥಳೀಯ ನಗರಸಭಾ ಸದಸ್ಯ ಮತ್ತು ಸಂಘ ಪರಿವಾರದ ಸ್ವಯಂ ಸೇವಕ ವಿಜಯ  ಮತ್ತು  ಸಾಮಾಜಿಕ ಕಾರ್ಯಕರ್ತ ವಾಸುದೇವ ಭಟ್ ಪೆರಂಪಳ್ಳಿ ಎರಡು ದಿನಗಳ ಮೊದಲೇ ಕಾಲೊನಿಗೆ ಭೇಟಿ ನೀಡಿ ಮಾಹಿತಿ ನೀಡಿದ್ದರು . ಅದರಂತೆ ಉತ್ಸಾಹ ಮತ್ತು ಸಂತೋಷದಿಂದ ನಿವಾಸಿಗಳು ಕಾಲೊನಿಯ ರಸ್ತೆಗಳಲ್ಲಿ ತಳಿರು ತೋರಣ ರಂಗೋಲಿ ಹಾಕಿ ಸಿಂಗರಿಸಿದ್ದರು .ಸಾಮೂಹಿಕ ಭಜನೆಯೊಂದಿಗೆ ಶ್ರೀಗಳನ್ನು ಬರಮಾಡಿಕೊಂಡರು . ಬಳಿಕ ಅಲ್ಲಿನ ಮೂರು ಮನೆಗಳಿಗೆ ಭೇಟಿ ನೀಡಿ ರಾಮದೀಪಗಳನ್ನು ಬೆಳಗಿಸಿ ಮನೆ ಮಂದಿಯೊಂದಿಗೆ ಕುಶಲೋಪರಿ ನಡೆಸಿದ ಶ್ರೀಗಳು ಶ್ರೀರಾಮ ಜಯರಾಮ ಜಯಜಯರಾಮ ಮಂತ್ರದೀಕ್ಷೆ ಕೊಟ್ಡು ನಿತ್ಯ ಶುದ್ಧ ಮನಸ್ಸಿನಿಂದ ಈ ಮಂತ್ರ ಜಪಿಸುವಂತೆ ತಿಳಿಸಿದರು . ಮೂರು ಮನೆಯವರು ಶ್ರೀಗಳಿಗೆ ಫಲ ಪುಷ್ಟ ಸಹಿತ ಭಕ್ತಿ ಗೌರವ ಅರ್ಪಿಸಿದರು .‌

ಶ್ರೀ ಮಠದ ವತಿಯಿಂದ ಎಲ್ಲ ಮನೆಗಳಿಗೆ ದೀಪ ಒದಗಿಸಿ ರಾಮದೀಪ ಬೆಳಗಿಸಲಾಯಿತು . ಅಲ್ಲಿಂದ ಬಡಾವಣೆಯ ಶ್ರೀ ಮೂಕಾಂಬಿಕಾ ಭಜನಾ ಮಂದಿರಕ್ಕೆ ಬಂದು ಶ್ರೀ ದೇವಿಯ ಮುಂಭಾಗದಲ್ಲಿ ದೀಪ ಹಚ್ಚಿ ಮಂಗಳಾರತಿ ಬೆಳಗಿದರು .‌ ಮುಂಭಾಗದ ಅಂಗಣದಲ್ಲಿ ಸಮಸ್ತ ನಿವಾಸಿಗಳಿಗೆ ಸಂದೇಶ ನೀಡಿ  ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಸಮಸ್ತ ಹಿಂದೂ ಸಮಾಜದ ಸಹಕಾರ ಸಹಭಾಗಿತ್ವ ಪಡೆಯಲು ಎಲ್ಲ ಸ್ತರಗಳ ಹಿಂದೂ ಬಂಧುಗಳನ್ನು ಭೇಟಿಯಾಗುತ್ತಿದ್ದೇವೆ ಅದರಂತೆ ಇಲ್ಲಿಗೆ ಆಗಮಿಸಿದ್ದೇವೆ . 

ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆದು ಇಡೀ ದೇಶಕ್ಕೆ ರಾಮನ ಕೃಪೆಯಾಗಿ ಶಾಂತಿ  ಸುಭಿಕ್ಷೆ ಸಮೃದ್ಧಿ ನೆಲೆಸಲು ನಾವೆಲ್ಲ ಪ್ರತೀನಿತ್ತ ಮನೆಮನೆಗಳಲ್ಲಿ ರಾಮನಿಗಾಗಿ ದೀಪ ಬೆಳಗಿ  ರಾಮಂತ್ರಜಪ ರಾಮ ಭಜನೆ ನಡೆಸಬೇಕು . ಪ್ರತಿಯೊಬ್ಬರಲ್ಲಿ ರಾಮನ ಜೀವನಾದರ್ಶಗಳು ನೆಲೆಗೊಳ್ಳಬೇಕು .‌ನಾವೆಲ್ಲ ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿ ಸಮಾಜದ ಒಳಿತಿಗೆ ಶ್ರಮಿಸಬೇಕು ಎಂದರು . ಎಲ್ಲರಿಗೂ ರಾಮ ಮಂತ್ರ ಬೋಧಿಸಿದರು . ಸುಬ್ರಹ್ಮಣ್ಯ ಷಷ್ಠೀಯಾದ್ದರಿಂದ ಶ್ರೀ ಮಠದ ಅಧೀನದಲ್ಲಿರುವ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ಮಾಡಿಸಿ ತಂದಿದ್ದು ಎಲ್ಲರಿಗೂ ಶ್ರೀಗಳು ನೀಡಿ ಆಶೀರ್ವದಿಸಿದರು.

ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ವಿಧಿವಶರಾಗಿ ಒಂದು ವರ್ಷದೊಳಗೆ ಶ್ರೀಮಠದ ಎಲ್ಲ ಜವಾಬ್ದಾರಿಗಳಿಗೆ ಹೆಗಲು ಕೊಟ್ಟ ಶ್ರೀವಿಶ್ವಪ್ರಸನ್ನತೀರ್ಥರು ಗುರುಗಳು ನಿರ್ವಹಿಸಿದ್ದ ಸಾಮಾಜಿಕ ಕಾರ್ಯಗಳನ್ನೂ ಮುನ್ನಡೆಸುವ ಸಂಕಲ್ಪ ಮಾಡಿರುವುದು ಅತ್ಯಂತ ಶ್ಲಾಘನೀಯ ಎಂದು ವಿಜಯ ಪೂಜಾರಿ ತಿಳಿಸಿದರು .ವಿಹಿಂಪ ‌ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ ಉಪಸ್ಥಿತರಿದ್ದರು

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ