Featured
ನಿಷ್ಠಾವಂತರನ್ನು ಕೈಬಿಡಬೇಡಿ : ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರಿಕೆಯಲ್ಲಿ ಜಾಹೀರಾತು ನೀಡಿದ ಮಸ್ಕಿ ಬಿಜೆಪಿ ಕಾರ್ಯಕರ್ತರು..!

ರಾಯಚೂರು : ಇದೊಂಥರಾ ವಿಚಿತ್ರ ಪ್ರಕರಣ. ಈಗಾಗಲೇ ಅನರ್ಹಗೊಂಡಿರೋ 17 ಶಾಸಕರಿಗೆ ಬಿಜೆಪಿ ಟಿಕೆಟ್ ನೀಡೋದು ಪಕ್ಕಾ ಆಗಿದೆ. ಇದೇ ವಿಚಾರವಾಗಿ ಹೊಸಕೋಟೆ, ಕೆ.ಆರ್.ಪುರಂ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ನಿಷ್ಠಾವಂತ ಬಿಜೆಪಿ ಮುಖಂಡರು, ಕಾರ್ಯಕರ್ತರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆದ್ರೆ, ವಿಚಿತ್ರ ಎನ್ನುವಂತೆ ಮಸ್ಕಿಯಲ್ಲಿ ಬಿಜೆಪಿ ಕಾರ್ಯಕರ್ತರು ಈ ಕುರಿತು ಪತ್ರಿಕೆಯಲ್ಲೇ ಜಾಹೀರಾತು ನೀಡಿದ್ದಾರೆ.
ಯೆಸ್. ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದವರು ಬಸವನಗೌಡ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 213 ಮತಗಳಿಂದ ಸೋತಿದ್ರು. ಕಾಂಗ್ರೆಸ್ನ ಪ್ರತಾಪ್ ಗೌಡ ಪಾಟೀಲ್ ಗೆಲುವು ಸಾಧಿಸಿದ್ರು. ಆದ್ರೀಗ, ಪ್ರತಾಪ್ ಗೌಡ ಪಾಟೀಲ್ಗೆ ಬಿಜೆಪಿ ಟಿಕೆಟ್ ನೀಡ್ತಿರೋದಕ್ಕೆ ನಿಷ್ಠಾವಂತ ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ. ಅದು ಸ್ಥಳೀಯ ಪತ್ರಿಕೆಯೊಂದರಲ್ಲಿ ಜಾಹೀರಾತು ನೀಡುವ ಮೂಲಕ ಹೊಸ ವಿವಾದವನ್ನ ಸೃಷ್ಟಿಸಿದ್ದಾರೆ.
ಸ್ಥಳೀಯ ಪತ್ರಿಕೆಗೆ ನೀಡುವ ಜಾಹೀರಾತು ಈ ರೀತಿ ಇದೆ ನೋಡಿ..
ಹೀಗೆ ವಿಚಿತ್ರವಾದ ಜಾಹೀರಾತು ನೀಡಿ, ಸ್ಥಳೀಯ ಜನರ ಗಮನ ಸೆಳೆದಿದ್ದಾರೆ. ಅಲ್ಲದೆ, ಬಿಜೆಪಿ ಕಾರ್ಯಕರ್ತರಿಗೆ ಪ್ರತಾಪಗೌಡ ಪಾಟೀಲ್ ಈ ಹಿಂದೆ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಿಗೆ ನಿವೇದನೆ ಎಂದು ಜಾಹೀರಾತು ನೀಡಲಾಗಿದೆ.
ಮಸ್ಕಿ ಬಿಜೆಪಿ ಕಾರ್ಯಕರ್ತರ ಈ ನಿವೇದನೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ಗೆ ಮುಟ್ಟುತ್ತಾ ನೋಡೋಣ..
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















