Connect with us

Featured

ಪಿಎಂ ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ – ಪ್ರಧಾನಿಯಿಂದ ಕೃಷಿ ಮೂಲ ಸೌಕರ್ಯ ನಿಧಿ ಉದ್ಘಾಟನೆ

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Advertisement
Puradamma
Puradamma

ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ 8.5 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಪಿಎಂ ಕಿಸಾನ್ ಯೋಜನೆಯಡಿ 17 ಸಾವಿರ ಕೋಟಿ ರೂಪಾಯಿಯನ್ನ ವರ್ಗಾಯಿಸಿದರು. 2018ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯ 6ನೇ ಕಂತಿನ ಭಾಗವನ್ನು ಪ್ರಧಾನಿ ದೇಶದ ರೈತರ ಖಾತೆಗಳಿಗೆ ವರ್ಗಾಯಿಸಿದ್ದಾರೆ.

2018ರ ಡಿಸೆಂಬರ್‌ನಲ್ಲಿ ಆರಂಭವಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ದೇಶದ 9 ಕೋಟಿ ರೈತರಿಗೆ ಆರ್ಥಿಕ ಸಹಾಯವನ್ನು ಮಾಡುವ ಉದ್ದೇಶದಿಂದ 75 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ನೇರವಾಗಿ ವರ್ಗಾಯಿಸುವುದಾಗಿದೆ.

ನಿಜವಾದ ರೈತ ಫಲಾನುಭವಿಗಳಿಗೆ ಸರ್ಕಾರದ ಈ ನಗದು ಲಾಭ ಸಿಗಲು ಮತ್ತು ಯಾವುದೇ ರೀತಿಯಲ್ಲಿ ಸೋರಿಕೆ ತಡೆಗಟ್ಟಲು ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿರುವ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಕೋವಿಡ್-19 ಸಾಂಕ್ರಾಮಿಕದ ಈ ಸಮಯದಲ್ಲಿ ಯೋಜನೆಯು ರೈತರಿಗೆ ಸಹಕಾರಿಯಾಗಲಿದೆ.

ಕೃಷಿ ಮೂಲಸೌಕರ್ಯ ನಿಧಿ ಉದ್ಘಾಟನೆ: ಇನ್ನು ಕೃಷಿ ಪೂರಕವಾದ ಉದ್ಯಮಿಗಳು, ಸ್ಟಾರ್ಟ್ ಅಪ್ ಗಳು, ಕೃಷಿ ತಂತ್ರಜ್ಞಾನ ಆಧಾರಿತ ಉದ್ಯಮಿಗಳು, ರೈತರಿಗೆ ಸಹಾಯವಾಗಲು ಪ್ರಧಾನ ಮಂತ್ರಿ ಇಂದು 1 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ನೆರವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್ ಮತ್ತು ಕೃಷಿ ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

2029ರವರೆಗೆ 10 ವರ್ಷಗಳ ಕಾಲಾವಧಿಯನ್ನು ಇದು ಹೊಂದಿರುತ್ತದೆ. ರೈತರ ಬೆಳೆಯ ಸುಗ್ಗಿಯ ನಂತರ ಕೃಷಿ ಮೂಲಸೌಕರ್ಯಗಳ ನಿರ್ವಹಣೆಗೆ, ಸಮುದಾಯ ಬೆಳೆ ಸಂಪತ್ತುಗಳಿಗೆ ಆರ್ಥಿಕ ಬೆಂಬಲವಾಗಿ ಮತ್ತು ಬಡ್ಡಿ ರೂಪದಲ್ಲಿ ಹೂಡಿಕೆ ಮಾಡಲು ಸರ್ಕಾರದಿಂದ ಮಧ್ಯಮದಿಂದ ದೀರ್ಘಾವಧಿಯವರೆಗೆ ಸಾಲದ ಹಣಕಾಸು ನೆರವು ನೀಡುವ ಯೋಜನೆಯಾಗಿದೆ.

ಇದರಡಿ ಸುಮಾರು 1 ಲಕ್ಷ ಕೋಟಿ ರೂಪಾಯಿಗಳನ್ನು ಹಲವು ಸಂಸ್ಥೆಗಳ ಮೂಲಕ ಸಾಲವಾಗಿ ಪ್ರಾಥಮಿಕ ಕೃಷಿ-ಕ್ರೆಡಿಟ್ ಸೊಸೈಟಿಗಳು, ರೈತ ಗುಂಪುಗಳು, ರೈತ ಉತ್ಪನ್ನ ಸಂಘಗಳು, ಕೃಷಿ ಉದ್ಯಮಿಗಳು, ಸ್ಟಾರ್ಟ್ ಅಪ್ ಗಳು, ಕೃಷಿ-ತಾಂತ್ರಿಕ ಸಂಸ್ಥೆಗಳಿಗೆ ನೀಡಲಾಗುತ್ತದೆ. ಇದಕ್ಕಾಗಿ ಈಗಾಗಲೇ 11 ಸಾರ್ವಜನಿಕ ವಲಯ ಬ್ಯಾಂಕ್ ಗಳು ಕೃಷಿ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡಿವೆ.

Advertisement
Puradamma
Puradamma

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ