Featured
ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಕಂಬನಿ
![](https://risingkannada.com/wp-content/uploads/2020/09/suresh-angadi-1.jpg)
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೊರೊನಾಗೆ ಬಲಿಯಾದ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿಎಸ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ,ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಹಲವಾರು ಗಣ್ಯರು ದಿಗ್ಬ್ರಮೆ ಮತ್ತು ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ನಲ್ಲಿ , ಸುರೇಶ್ ಅಂಗಡಿಯವರು ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯುವಲ್ಲಿ ಶ್ರಮ ವಹಿಸಿದ್ದರು.ದಕ್ಷ ಮತ್ತು ಪರಿಣಾಮಕಾರಿ ಸಚಿವರಾಗಿದ್ದರು. ಅವರ ನಿಧನ ತುಂಬ ದುಃಖ ತಂದಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ ಸೂಚಿಸುವುದಾಗಿ ತಿಳಿಸಿದ್ದಾರೆ.
ಇನ್ನು ಸಿಎಂ ಬಿಎಸ್ವೈ ಟ್ವೀಟರ್ನಲ್ಲಿ ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಸಭ್ಯ,ಸೌಮ್ಯ ಸ್ವಭಾವದವರಾಗಿ,ಜನಪ್ರಿಯ ನಾಯಕರಾಗಿ ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವರ ನಿಧನ ಪಕ್ಷಕ್ಕೆ ರಾಜ್ಯಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಬರೆದಿದ್ದಾರೆ.
ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿಅವರ ನಿಧನ ದುರದೃಷ್ಟಕರ ಮತ್ತು ಬೇಸರದ ಸಂಗತಿಯಾಗಿದೆ.ರಾಜ್ಯದ ಅಭಿವೃದ್ದಿ ಬಗ್ಗೆ ಭಾರೀ ಕಾಳಜಿ ಇತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ ಸಂಸದರು, ಕೇಂದ್ರ ರೈಲ್ವೆ ರಾಜ್ಯ ಸಚಿವರೂ ಆದ ಸುರೇಶ್ ಅಂಗಡಿ ಅವರು ವಿಧಿವಶರಾದದ್ದು ತೀವ್ರ ದಿಗ್ಬ್ರಮೆಯನ್ನುಂಟು ಮಾಡಿದೆ ಎಂದು ಟ್ವೀಟರ್ನಲ್ಲಿ ಮಾಜಿ ಸಿಎಂ ಕುಮಾರ ಸ್ವಾಮಿ ಬರೆದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?