Featured
ಹನುಮಾನ್ ಚಾಲೀಸಾ ಪಠಿಸಿ – ಕೊರೊನಾ ತೊಲಗಿಸಿ – ಇದು ಸಂಸ್ದೆ ಪ್ರಜ್ಞಾ ಸಿಂಗ್ ಸಂದೇಶ..!

ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಕೊರೊನಾನವನ್ನ ಜಗತ್ತಿನಿಂದ ತೊಡೆದು ಹಾಕಲು ಪ್ರತಿಯೊಬ್ಬರು ದಿನಕ್ಕೆ ಐದು ಬಾರಿ ಹನುಮಾನ್ ಚಾಲಿಸ್ ಅನ್ನು ಪಠಿಸಬೇಕು ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮನವಿ ಮಾಡಿದ್ದಾರೆ.
ರಾಮ ಮಂದಿರ ದೇವಾಲಯದ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಆಗಸ್ಟ್ 05ಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡುವ ಮೂಲಕ ಜನರಲ್ಲಿ ಮನವಿ ಮಾಡಿರುವ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ನಾವೆಲ್ಲರೂ ಒಗ್ಗಟ್ಟಾಗಿ ಆಧ್ಯಾತ್ಮಿಕದ ಮೂಲಕ ಮಾರಣಾಂತಿಕ ಕೊರೊನಾವನ್ನು ಜಗತ್ತಿನಿಂದ ತೊಡೆದು ಹಾಕಲು ಪ್ರಯತ್ನಿಸೋಣ. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಬಯಸೋಣ. ಹೀಗಾಗಿ ಜುಲೈ 25 ರಿಂದ ಆಗಸ್ಟ್ 05ರವರೆಗೆ ಎಲ್ಲರೂ ತಮ್ಮ ಮನೆಗಳಲ್ಲಿ ದಿನಕ್ಕೆ ಐದು ಬಾರಿ ಹನುಮಾನ್ ಚಾಲಿಸ್ ಅನ್ನ ಪಠಿಸಿ ಎಂದಿದ್ದಾರೆ.
ದೇಶದ ಎಲ್ಲಾ ಹಿಂದೂಗಳು ಒಂದೇ ಧ್ವನಿಯಲ್ಲಿ ‘ಹನುಮಾನ್ ಚಾಲಿಸಾ” ಪಠಿಸಿದರೆ, ಆ ಶಕ್ತಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ ಮತ್ತು ನಾವು ಕೊರೊನಾ ವೈರಸ್‌ನಿಂದ ಮುಕ್ತರಾಗುತ್ತೇವೆ. ಇದು ಭಗವಾನ್ ರಾಮನಿಗಾಗಿ ನಿಮ್ಮ ಪ್ರಾರ್ಥನೆಯಾಗಲಿದೆ ಎಂದಿದ್ದಾರೆ. ಆಗಸ್ಟ್ 05 ರಂದು ಮನೆಯಲ್ಲೇ ದೀಪಗಳನ್ನು ಬೆಳಗಿಸಿ ರಾಮನಿಗೆ ಆರತಿ ಅರ್ಪಿಸುವ ಮೂಲಕ ನಿಮ್ಮ ಆಚರಣೆಯನ್ನು ಮುಕ್ತಾಯಗೊಳಿಸಿ ಎಂದು ಪ್ರಜ್ಞಾ ಸಿಂಗ್ ಠಾಕೂರ್ ಕೇಳಿಕೊಂಡಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ ಮಧ್ಯಪ್ರದೇಶದಲ್ಲಿ ಕೊರೋನಾ ಸೋಂಕನ್ನು ತಡೆಯುವ ಸಲುವಾಗಿ ಇಲ್ಲಿನ ಬಿಜೆಪಿ ಸರ್ಕಾರ ಆಗಸ್ಟ್ 4ರ ವರೆಗೆ ಲಾಕ್‌ಡೌನ್ ಘೋಷಿಸಿದೆ. ಲಾಕ್‌ಡೌನ್ 4ಕ್ಕೆ ಮುಗಿದರೂ ಹನುಮಾನ್ ಚಾಲಿಸಾ ಪಠಣ ಆಗಸ್ಟ್ 05 ರಂದು ಕೊನೆಗೊಳ್ಳಲಿದೆ. ಈ ದಿನ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದ್ದು, ಆ ದಿನವನ್ನು ನಾವು ದೀಪಾವಳಿಯಂತೆ ಆಚರಿಸಲಿದ್ದೇವೆ ಎಂದು ಪ್ರಜ್ಞಾ ಸಿಂಗ್ ಠಾಕೂರ್ ತಿಳಿಸಿದ್ದಾರೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?