ಬೆಂಗಳೂರು
ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ, ರಜನಿಕಾಂತ್ ಸಂತಾಪ..!
![](https://risingkannada.com/wp-content/uploads/2024/04/dwarakish.jpg)
cinema : ಸ್ಯಾಂಡಲ್ವುಡ್ (Sandalwood) ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ದ್ವಾರಕೀಶ್ ನಿಧನಕ್ಕೆ ಸಂತಾಪ ಸೂಚಿಸಿದ್ದು ಇದೀಗ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿರಿಯ ನಟ ರಜನಿಕಾಂತ್ ಅವರು ಕೂಡ ಕನ್ನಡದ ಹಿರಿಯ ನಟ ದ್ವಾರಕೀಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ದ್ವಾರಕೀಶ್ ನಿಧನದ ಬಗ್ಗೆ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಚಿತ್ರೋದ್ಯಮಕ್ಕೆ ದ್ವಾರಕೀಶ್ ಅವರ ಕೊಡುಗೆಗಳು ಅಪಾರವಾಗಿವೆ, ದಶಕಗಳ ಕಾಲ ಅತ್ಯದ್ಭುತ ನಟನೆ ಮತ್ತು ಉತ್ತಮ ಚಿತ್ರಗಳನ್ನು ನೀಡಿದ್ದಾರೆ. ಪ್ರೇಕ್ಷಕರನ್ನು ಆಕರ್ಷಿಸುವ ಮತ್ತು ಯುವ ಪ್ರತಿಭೆಗಳನ್ನು ಬೆಂಬಲಿಸುವ ಅವರ ಸಾಮರ್ಥ್ಯವು ಕನ್ನಡ ಚಿತ್ರರಂಗದ ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ. ಅವರ ನಿಧನದಿಂದ ದುಃಖವಾಗಿದೆ. ಅವರ ಅಪೂರ್ವ ಪ್ರಯಾಣವನ್ನು ನಾವು ಸದಾ ಸ್ಮರಿಸುತ್ತೇವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು’ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ತಮಿಳು ನಟ ಸೂಪರ್‌ಸ್ಟಾರ್ ರಜನಿಕಾಂತ್ ಕೂಡ ಗೆಳೆಯನ ಸಾವಿಗೆ ಕಂಬನಿ ಮಿಡಿದಿದ್ದು, ತಮ್ಮ ‘ಆತ್ಮೀಯ ಸ್ನೇಹಿತ’ನ ನಷ್ಟಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಜನಿ ಅವರು ದ್ವಾರಕೀಶ್ ಅವರ ಹಠಾತ್ ನಿಧನವನ್ನು ‘ನೋವು’ ಎಂದು ಕರೆದಿದ್ದಾರೆ. “ನನ್ನ ಬಹುಕಾಲದ ಆತ್ಮೀಯ ಗೆಳೆಯ ದ್ವಾರಕೀಶ್ ಅವರ ನಿಧನ ನನಗೆ ತುಂಬಾ ನೋವು ತಂದಿದೆ.. ಹಾಸ್ಯ ನಟನಾಗಿ ವೃತ್ತಿ ಜೀವನ ಆರಂಭಿಸಿ, ದೊಡ್ಡ ನಿರ್ಮಾಪಕ ಮತ್ತು ನಿರ್ದೇಶಕನಾಗಿ ತನ್ನನ್ನು ತಾನು ಬೆಳೆಸಿದ.. ಹಳೆಯ ಸವಿನೆನಪುಗಳು ನನ್ನ ಮನದಲ್ಲಿ ಮೂಡುತ್ತಿದೆ. ಅವರಿಗೆ ನನ್ನ ಭಾವಪೂರ್ಣ ಸಂತಾಪಗಳು ಎಂದು ಹೇಳಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ 11 ಗಂಟೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ರವೀಂದ್ರ ಕಲಾಕ್ಷೇತ್ರಕ್ಕೆ ಅಭಿಮಾನಿಗಳು ಬೃಹತ್ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಬಳಿಕ ಮಧ್ಯಾಹ್ನದ ನಂತರ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ದ್ವಾರಕೀಶ್ ತಿಳಿಸಿದ್ದಾರೆ.
ಹಿರಿಯ ನಟ, ನಿರ್ಮಾಪಕನನ್ನು ಕಳೆದುಕೊಂಡ ನೋವು ಚಿತ್ರರಂಗವನ್ನು ಕಾಡ್ತಿದೆ. ದ್ವಾರಕೀಶ್ ನಿವಾಸಕ್ಕೆ ಕನ್ನಡ ಚಿತ್ರರಂಗದ ಗಣ್ಯರ ದಂಡೇ ಹರಿದು ಬರ್ತಿದೆ. ಅನೇಕ ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ದ್ವಾರಕೀಶ್ ಮನೆಗೆ ಆಗಮಿಸಿದ ದರ್ಶನ್ ಹಿರಿಯ ನಟನ ಅಂತಿಮ ದರ್ಶನ ಪಡೆದಿದ್ದಾರೆ.
![](https://risingkannada.com/wp-content/uploads/2020/04/RISING-KANNADA-logo-150px.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?