Featured
ಕೊರೊನಾ ಮಾರ್ಗಸೂಚಿ ಪಾಲಿಸದ ಹಿನ್ನಲೆ – ಬಸವಕಲ್ಯಾಣದ ಖಾಸಗಿ ಆಸ್ಪತ್ರೆ ರಿಜಿಸ್ಟ್ರೇಷನ್ ಸಸ್ಪೆಂಡ್..!
![](https://risingkannada.com/wp-content/uploads/2020/06/image.jpg)
ರೈಸಿಂಗ್ ಕನ್ನಡ :
ವಿಶ್ವ ಕುಮಾರ್, ಬೀದರ್ :
ಕೋವಿಡ್-19 ನಿಯಂತ್ರಣದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಹಿನ್ನಲೆ ಖಾಸಗಿ ಆಸ್ಪತ್ರೆಯೊಂದರ ನೋಂದಣಿ ಅಮಾನತುಗೊಳಿಸಲಾಗಿದೆ. ಬಸವಕಲ್ಯಾಣ ತಾಲೂಕಿನ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಆಸ್ಪತ್ರೆಯೊಂದರ ನೋಂದಣಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಆಸ್ಪತ್ರೆಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ನಿಯಂತ್ರಣ ಸಂಬಂಧ ಆರೋಗ್ಯ ಇಲಾಖೆ ಜಾರಿಗೊಳಿಸಿದ ನೀತಿ, ನಿಯಮಗಳನ್ನ ಗಾಳಿಗೆ ತೂರಲಾಗಿದ್ದು, ಕೋವಿಡ್ ನಿಯಮದ ಅನ್ವಯ ಇಲಾಖೆಗೆ ಕಾಲ ಕಾಲಕ್ಕೆ ಸೂಕ್ತ ಮಾಹಿತಿ ನೀಡಿಲ್ಲ. ಆಸ್ಪತ್ರೆಯಲ್ಲಿ ದಾಖಲಾಗಿ ಬೇರೆ, ಬೇರೆ ಜಿಲ್ಲೆಗಳ ಆಸ್ಪತ್ರೆಗೆ ತೆರಳಿದ ಮೂವರು ವ್ಯಕ್ತಿಗಳು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಉಸಿರಾಟದ ತೊಂದರೆ, ತೀವ್ರ ಜ್ವರ, ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರೂ ಕೂಡ ಮಾಹಿತಿ ನೀಡದ ಕಾರಣ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಆಸ್ಪತ್ರೆಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇನ್ನೂ ಈ ಮದ್ಯೆ ಆಸ್ಪತ್ರೆಯಲ್ಲಿ ಅರ್ಹರು ಸಿಬ್ಬಂದಿಗಳುನ್ನು ನೇಮಿಸಿಕೊಳ್ಳದೆ ಇತರರನ್ನ ನೆಮಿಸಿಕೊಂಡು ಆಸ್ಪತ್ರೆ ನಡೆಸುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?