Uncategorized
ಭೂ ಸುಧಾರಣೆ,ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧ: ರೈತ ಪರ ಸಂಘಟನೆಗಳಿಂದ ಪ್ರತಿಭಟನೆ
ರೈಸಿಂಗ್ ಕನ್ನಡ:
ದಾವಣಗೆರೆ:
ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ದಾವಣಗೆರೆಯಲ್ಲಿ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ರಸ್ತೆ ತಡೆದು ಹೋರಾಟ ನಡೆಸಿ ಕೇಂದ್ರ ವಿರುದ್ಧ ಘೋಷಣೆ ಕೂಗಿದರು. ಕಿಸಾನ್ ಕಾಂಗ್ರೆಸ್,ಹಸಿರು ಸೇನೆ, ಕಬ್ಬು ಬೆಳೆಗಾರರ ಸಂಘ ಸೇರಿದಂತೆ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.
ಜಾಹೀರಾತು
ಈ ವೇಳೆ ಮಾತನಾಡಿದ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು ವಿ ಶಿವಗಂಗಾ ಕೇಂದ್ರ ಸರ್ಕಾರ ರೈತರ ಮರಣ ಶಾಸನ ಬರೆಯಲು ಹೊರಟಿದೆ. ಈ ಕಾಯ್ದೆಗಳ ತಿದ್ದುಪಡಿಯಿಂದ ರೈತ ವರ್ಗಕ್ಕೆ ಅನ್ಯಾಯವಾಗಲಿದೆ ಎಂದರು.
ಎಪಿಎಂಸಿ ಹಾಗೂ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯನ್ನ ಕೂಡಲೇ ಹಿಂಪಡೆಯಬೇಕು ಇಲ್ಲವಾದರೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಬಸವರಾಜು ವಿ ಶಿವಗಂಗಾ ತಿಳಿಸಿದರು. ಹೆದ್ದಾರಿ ಬಂದ್ ಹಿನ್ನೆಲೆ ಕೆಲ ಕಾಲ ವಾಹನ ಸಂಚಾರಕ್ಕೆ ತೊಂದರೆ ಕೂಡ ಆಯಿತು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?