Featured
ದ್ವಿತೀಯ ಪಿಯುಸಿ ಫಲಿತಾಂಶ – ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ – ಉಡುಪಿ, ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ – ವಿಜಯಪುರ, ರಾಯಚೂರಿಗೆ ಕೊನೆ ಸ್ಥಾನ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 6,75,277 ಈ ಬಾರಿ ಪರೀಕ್ಷೆ ಬರೆದಿದ್ದರು. 3,84,947 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಕಳೆದ ಸಾಲಿಗೆ ಹೋಲಿಸಿದ್ರೆ, ಈ ಬಾರಿ ತೇರ್ಗಡೆ ಹೊಂದಿರುವವರ ಪ್ರಮಾಣ ಹೆಚ್ಚಾಗಿದೆ. ಶೇ. 69.20 ವಿದ್ಯಾರ್ಥಿಗಳು ಈ ಸಾಲಿನಲ್ಲಿ ಪಾಸ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದವರ ಪ್ರಮಾಣ, ಶೇ. 76.2ರಷ್ಟಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದವರ ಪ್ರಮಾಣ ಈ ಬಾರಿ ಹೆಚ್ಚಾಗಿದೆ. ಕಾಮರ್ಸ್‌ನಲ್ಲಿ 65.53 ಶೇ ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಶೇ.41.27 ರಷ್ಟು ಫಲಿತಾಂಶ ಬಂದಿದೆ.
ಇನ್ನೂ ಜಿಲ್ಲಾವಾರು ಫಲಿತಾಂಶವನ್ನ ನೋಡೋದಾದ್ರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನವನ್ನ ಹಂಚಿಕೊಂಡಿವೆ. ಕೊಡಗು ಜಿಲ್ಲೆ ದ್ವಿತೀಯ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಇನ್ನೂ ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳು ಕೊನೆಯ ಸ್ಥಾನವನ್ನ ಹಂಚಿಕೊಂಡಿವೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?