Featured
ವಿದ್ಯಾರ್ಥಿಗಳ ಜೊತೆ ಸರ್ಕಾರ ಚೆಲ್ಲಾಟ – ಅಶೋಕ್ ಆಕ್ರೋಶ
ಬೆಂಗಳೂರು : ಈಗಾಗಲೇ ಸಾವಿರಾರು ಬಸ್ಸುಗಳಿಗೆ ಕಡಿವಾಣ ಹಾಕಿ ವಿದ್ಯಾರ್ಥಿಗಳು ದಿನನಿತ್ಯ ಪಾರದಾಡುವಂತೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಈಗ ರಾಜಕೀಯ ಸಮಾವೇಶಗಳಿಗೆ ಜನ ಕರೆತರಲು ಬಸ್ಸುಗಳನ್ನು ನಿಯೋಜಿಸುವ ಮೂಲಕ ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರೋ ಆರ್.ಅಶೋಕ್, ಸಿಎಂ @siddaramaiah ನವರೇ, ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಅಗತ್ಯ ಸಂಖ್ಯೆಯ ಬಸ್ಸುಗಳನ್ನು ನಿಯೋಜಿಸಲು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಸಾರಿಗೆ ಸಂಸ್ಥೆಗಳಿಗೆ ಸೂಚನೆ ನೀಡಿ ಎಂದು ಆಗ್ರಹಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ @DKShivakumar ಅವರೇ, ತಮ್ಮ ಪಕ್ಷದ ರಾಜಕೀಯ ಸಮಾವೇಶಗಳಿಗೆ ಖಾಸಗಿ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳಿ. ಸರ್ಕಾರಿ ಬಸ್ಸುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ತೊಂದರೆ ಕೊಡಬೇಡಿ ಎಂದು ಒತ್ತಾಯಿಸಿ, ಡಿಚ್ಚಿ ಕೊಟ್ಟಿದ್ದಾರೆ..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?