Connect with us

Featured

KA – 05, AB 5919 – ಈ ಆಟೋದವರ ಬಗ್ಗೆ ಮಾಹಿತಿ ಸಿಕ್ರೆ, ರಚಿತಾ ರಾಮ್‌ ಇನ್ಸ್‌ಟಾಗ್ರಾಮ್‌ನಲ್ಲಿ ಟ್ಯಾಗ್‌ ಮಾಡಿ – ಅಭಿಮಾನಿಗಳೇ ದೇವ್ರು..!

ರೈಸಿಂಗ್ ಕನ್ನಡ :

ಸಿನಿಮಾ ಡೆಸ್ಕ್ :

ಅಭಿಮಾನದಲ್ಲಿ ಸ್ವಾರ್ಥ ಇರೋದಿಲ್ಲ. ಸ್ವಾರ್ಥಿಸೋರು ಯಾರು ಅಭಿಮಾನಿಗಳೇ ಅಲ್ಲ, ಅಭಿಮಾನ ಅನ್ನೋದು ಮನಸ್ಸಿನ ಮಾತು, ಹೃದಯದ ಭಾವನೆ, ಊಹಿಸಿಕೊಳ್ಳಲು ಆಗದ ಕಲ್ಪನೆ. ಸದ ಭೇಟಿ ಮಾಡಬೇಕು ಅನ್ನೋ ಚಡಪಡಿಕೆ ಅಷ್ಟೆ, ಅದ್ರಲ್ಲಿ ಯಾವುದೇ ಹುಚ್ಚಾಟವಿರೋದಿಲ್ಲ. ಇಷ್ಟಪಟ್ಟವರನ್ನ ಆರಾಧಿಸೋದಷ್ಟೆ ಅಭಿಮಾನ. ಸಿನಿಮಾ ಸ್ಟಾರ್‌ಗಳ ವಿಚಾರದಲ್ಲೂ ಹೀಗೆ,  ಸ್ಯಾಂಡಲ್‌ವುಡ್‌ನ ಡಿಂಪಲ್‌ ಕ್ವೀನ್ ರಚಿತಾ ರಾಮ್‌ಗೆ ಇಂತದ್ದೊಂದು ಅಭಿಮಾನಿ ಎದುರಾಗಿದ್ದಾರೆ. ಬೆಳಗ್ಗೆ ಬೆಳಗ್ಗೆಯೇ ಮನೆ ಮುಂದೆ ಬಂದವರು, ಮನಸ್ಸಿಗೆ ಹತ್ತಿರವಾಗಿದ್ದಾರೆ. ಕಣ್ಣಂಚಲ್ಲಿ ನೀರು ತರಿಸಿದ್ದಾರೆ. ಆದ್ರೆ, ಯಾವುದೇ ಸ್ವಾರ್ಥ ಭಾವನೆ ಇಲ್ಲದೆ, ತಮ್ಮ ಹೆಸರು ಮತ್ತು ಯಾವ ಊರು ಅನ್ನೋದನ್ನೂ ಹೇಳದೆ ಮಿಂಚಿನಂತೆ ಮಾಯವಾಗಿದ್ದಾರೆ.

ಇದರ ಬಗ್ಗೆ ರಚಿತಾ ರಾಮ್ ತಮ್ಮ ಇನ್ಸ್‌ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.  ದಯವಿಟ್ಟು ಇದಕ್ಕೆ ಉತ್ತರಿಸಿ ಎಂದಿದ್ದಾರೆ.  ಅಷ್ಟಕ್ಕೂ ರಚಿತಾ ರಾಮ್ ಮೀಟ್ ಮಾಡಿರೋ ಅಭಿಮಾನಿ ಯಾರು, ಅವರ ಯಾವ ಕಾರ್ಯಕ್ಕೆ ರಚಿತ ಭಾವುಕರಾಗಿದ್ದಾರೆ ಅನ್ನೋದನ್ನ ಈ ಪತ್ರ ಓದಿದ್ರೆ, ನಿಮಗೆ ಅರ್ಥವಾಗುತ್ತೆ.

Advertisement

“ಅಭಿಮಾನಿಗಳೇ ದೇವ್ರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮುಖಾಂತರ ಅಭಿಮಾನವನ್ನ ವ್ಯಕ್ತ ಪಡಿಸ್ತಾರೆ, ತುಂಬಾ ಸಂತೋಷ ಆಗುತ್ತೆ. ಆದ್ರೇ ಇವತ್ ಬೆಳಿಗ್ಗೆ ಅಮ್ಮ ಬಂದು “ರಚ್ಚು ಬೆಳ್‌ಬೆಳಗ್ಗೆನೆ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೇ ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ರು ನನ್ನ ನೋಡ್ತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೂ ಬಿಡ್ದೇ “ಮೇಡಂ ನಾವ್ ನಿಮ್ ದೊಡ್ಡ ಅಭಿಮಾನಿ ಮೇಡಂ ನನ್ ಆಟೋ ಮೇಲ್ 1st ಫೋಟೋ ನಿಮ್ದೇ ಇರ್ಬೇಕು ಮೇಡಂ” ಎಂದು ಗಿಫ್ಟ್ ವ್ರಾಪರ್ ಒಪನ್ ಮಾಡ್ಸಿ ನನ್ನ ಫೋಟೋನ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡರು. ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಫಿ ತೆಗೆದುಕೊಂಡು ಹೊರಡಲು ಮುಂದಾದರು; ನಿಜಕ್ಕೂ ಭಾವುಕನಾದೆ. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕನಾಗಿ ನಗುತ್ತಲೇ ಹೊರಟೇ ಬಿಟ್ಟರು. ತಮ್ಮ ಹೆಸರು, ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ; ನನ್ನ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ. ನಿಮ್ಮ ಪ್ರೀತಿಯ ಆಟೋದಲ್ಲಿ ನಿಮ್ಮ ಜೀವನದ ಪಯಣ ಸುಖಕರವಾಗಿರಿಸಲಿ ಅಂತ ದೇವರಲ್ಲಿ ಬೇಡ್ಕೋತೀನಿ. ನನ್ನ ಕಲಾಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು. ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಲ್ಲ ಶೂನ್ಯ ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ, ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಲಿಲ್ಲ, ದಯವಿಟ್ಟು ಈ ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನ ನಿಮ್ಮ instagram account ನಲ್ಲಿ ಹಾಕಿ ನನ್ನನ್ನ tag ಮಾಡಿ. ನಾನು repost ಮಾಡುತ್ತೆನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ. ಇಂತಿ ನಿಮ್ಮ ರಚಿತಾ ರಾಮ್… ಎಂದು ರಚ್ಚು ಇನ್ಸ್‌ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ