Featured
ಬಾಗಲಕೋಟೆ-ಕುಡಚಿ ರೈಲು ಮಾರ್ಗ ವಿಶೇಷ ಸಭೆ- ಭೂಮಿ ಒದಗಿಸಿದರೆ ತಕ್ಷಣ ಕಾಮಗಾರಿ ಆರಂಭ- ಸಚಿವ ಸುರೇಶ್ ಅಂಗಡಿ ಭರವಸೆ
ರೈಸಿಂಗ್ ಕನ್ನಡ:
ಬೆಳಗಾವಿ:
ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭರವಸೆ ನೀಡಿದರು.
ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು ಹಣ ಬಿಡುಗಡೆ ಪ್ರಕ್ರಿಯೆ ಸುಗಮವಾಗಲಿದೆ. ಆದ್ದರಿಂದ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆ ತಕ್ಷಣ ಆರಂಭಿಸುವಂತೆ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಸಂಪೂರ್ಣ ಜಮೀನು ಒದಗಿಸುವುದು ಹಾಗೂ ಯೋಜನೆ ಕಾಮಗಾರಿಯ ಶೇ.50ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕಿರುವುದರಿಂದ ಸ್ಥಳೀಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಆದಷ್ಟು ಬೇಗ ಈ ಕೆಲಸ ಪೂರ್ಣಗೊಳಿಸಿದರೆ ಯೋಜನೆ ಅನುಷ್ಠಾನ ಸುಲಭವಾಗಲಿದೆ. ಭೂಮಿ ಗುರುತಿಸಿಕೊಡುವ ಕೆಲಸ ರೈಲ್ವೆ ಇಲಾಖೆಯ ಅಧಿಕಾರಿಗಳು ಹದಿನೈದು ದಿನದೊಳಗೆ ಪೂರ್ಣಗೊಳಿಸಬೇಕು. ಅದಾದ ಬಳಿಕ ಸ್ವಾಧೀನ ಪ್ರಕ್ರಿಯೆಯನ್ನು ಉಭಯ ಜಿಲ್ಲಾಧಿಕಾರಿಗಳು ಆರಂಭಿಸಬೇಕು
- ಸುರೇಶ್ ಅಂಗಡಿ, ರೈಲ್ವೇ ಖಾತೆ ರಾಜ್ಯ ಸಚಿವ
ರೈಲ್ವೇ ಕಾಮಗಾರಿಗಾಗಿ ಬಾಕಿ ಉಳಿದಿರುವ 114 ಎಕರೆ ಭೂಸ್ವಾಧೀನ ಪ್ರಕ್ರಿಯೆ ತಕ್ಷಣ ಆರಂಭಿಸಬೇಕು ಎಂದು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಅರಣ್ಯ ಇಲಾಖೆಗೆ ಸಂಬಂಧಿಸಿದ 41 ಎಕರೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ ಹದಿನೈದು ದಿನಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲು ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಅಂಗಡಿ ಸೂಚನೆ ನೀಡಿದರು.
ವಿಶೇಷ ಸಭೆಯಲ್ಲಿ ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ್, ಶಾಸಕರಾದ ವೀರಣ್ಣ ಚರಂತಿಮಠ, ದುರ್ಯೋಧನ ಐಹೊಳೆ, ಸಿದ್ದು ಸವದಿ ಸೇರಿದಂತೆ ಹಲವರು ಈ ಸಭೆಯಲ್ಲಿ ಭಾಗವಹಿಸಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?