ರೈಸಿಂಗ್ ಕನ್ನಡ:
ಬೆಳಗಾವಿ:
ಕೆಲವೇ ದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುವುದರಿಂದ ಬೆಳಗಾವಿ ಜಿಲ್ಲೆಯಲ್ಲಿ ವೆಂಟಿಲೇಟರ್, ಹಾಸಿಗೆಗಳು ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಂದಿನ ಎರಡು ತಿಂಗಳು ಪ್ರಮುಖವಾಗಿರುವುದರಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಪೊಲಿಸ್ ಇಲಾಖೆ ಇನ್ನಷ್ಟು ಜಾಗರೂಕತೆಯಿಂದ ಕೆಲಸ ಮಾಡಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಸೂಚಿಸಿದ್ದಾರೆ.
ನೆಗಡಿ, ಜ್ವರದ ಔಷಧ ತೆಗೆದುಕೊಳ್ಳುತ್ತಿರುವ ಬಗ್ಗೆ ಮೆಡಿಕಲ್ಗಳ ಮೂಲಕ ತಕ್ಷಣ ಮಾಹಿತಿಯನ್ನು ಕಲೆಹಾಕಿ ಅಂತಹವರನ್ನು ಗುರುತಿಸಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಹೋಮ್ ಕ್ವಾರಂಟೈನ್ ನಲ್ಲಿ ಇರುವವರ ಬಗ್ಗೆ ನಿರಂತರ ನಿಗಾ ವಹಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ನಿರ್ದೇಶನ ಕೂಡ ಮಾಡಿದ್ದಾರೆ.
ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ, ಸೋಂಕಿತರು ಯಾರೂ ಸಮುದಾಯದ ಜತೆ ಬೆರೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು. ರೈಲ್ವೆ ಇಲಾಖೆಯ ರಾಜ್ಯ ಸಚಿವದ ಸುರೇಶ್ ಅಂಗಡಿ, ಭಾನುವಾರ ಲಾಕ ಡೌನ್ ಯಶಸ್ವಿಯಾಗಿದ್ದು, ಜನರು ಸ್ವಯಂಪ್ರೇರಣೆಯಿಂದ ಬೆಂಬಲ ನೀಡಿದ್ದಾರೆ. ಜನಪ್ರತಿನಿಧಿಗಳು ಕೂಡ ಸ್ವಯಂಪ್ರೇರಣೆಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ತಡೆಗಟ್ಟಲು ಸಹಕರಿಸಬೇಕಿದೆನ ಎಂದು ಹೇಳಿದರು. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಸೋಂಕು ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಲ್ಲ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಈ ವೇಳೆ ಶಾಸಕ ದುರ್ಯೋಧನ ಐಹೊಳೆ,ಶಾಸಕ ಮಹಾಂತೇಶ ದೊಡ್ಡಗೌಡರ, ಶಾಸಕ ಅನಿಲ್ ಬೆನಕೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ನಗರ ಪೊಲಿಸ್ ಆಯುಕ್ತರಾದ ತ್ಯಾಗರಾಜನ್ ಮತ್ತಿತರರು ಉಪಸ್ಥಿತರಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?