Connect with us

ಬೆಂಗಳೂರು

ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

Bengalore : ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದುಬಂದಿದೆ, ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.

ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ ಎಂದರು. ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿ ಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದರು.

ಕಠಿಣ ಕ್ರಮ ರಾಜ್ಯದಲ್ಲಿ ಇಂಥದ್ದು ನಡೆಯಬಾರದಿತ್ತು. ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಪುನ: ಇಂಥ ಘಟನೆ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಲಲಾಗುವುದು ಎಂದರು.

ರಾಜಕಾರಣ ಮಾಡಬಾರದು ವಿರೋಧ ಪಕ್ಷಗಳು ಈ ವಿಷಯಗಳ ಬಗ್ಗೆ ರಾಜಕಾರಣ ಮಾಡಬಾರದು. ಎಲ್ಲರೂ ಸಹಕರಿಸಬೇಕು ಎಂದರು. ಪೋಲಿಸರೊಂದಿಗೆ ಮಾತನಾಡಿದ್ದು, ಸದ್ಯದಲ್ಲಿಯೇ ಪೂರ್ಣ ಚಿತ್ರಣ ಸಿಗಲಿದೆ. ವಿಚಾರಣೆ ತ್ವರಿತಗತಿಯಲ್ಲಿ ನಡೆದಿದೆ ಎಂದರು ಹೇಳಿದರು.

Advertisement

ದೇಶದಲ್ಲಿ ಶೇ 5 ರಷ್ಟು ಮಾತ್ರ ಬಡತನ:ಪರಿಶೀಲನೆ ಅಗತ್ಯ ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಅದನ್ನು ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ. ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ. ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ. ಬಡತನ ರೇಖೆಗಿಂತ ಕೆಳಗಿರುವ 82 ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ ಎಂದರು.

ಬಿಜೆಪಿ 50 ಕೋಟಿ ಆಮಿಷ ಒಡ್ಡುತ್ತಿದೆ :ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ. 113 ಕ್ಕಿಂತ ಹೆಚ್ಚು ಗೆದ್ದೇ ಇಲ್ಲ. 2018 ರಲ್ಲಿ 100 ಗೆದ್ದಿದ್ದರು. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ