Featured
ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ: ಮಾಜಿ ಸಿಎಂ ಸಿದ್ದರಾಮಯ್ಯ
ರೈಸಿಂಗ್ ಕನ್ನಡ:
ಬೆಂಗಳೂರು :
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರ ಕೂಡಲೇ ಸ್ವೀಕಾರ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವರದಿ ಸ್ವೀಕಾರ ಮಾಡಲು ಸರ್ಕಾರ ಹಿಂದೇಟು ಹಾಕಿದರೆ ಒಕ್ಕೂಟ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ. ಈ ಹೋರಾಟಕ್ಕೆ ನನ್ನ ಬೆಂಬಲವೂ ಇರಲಿದೆ ಎಂದು ಘೋಷಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಅವರು ಹೇಳಿದ್ದಿಷ್ಟು :
ಆರ್ಥಿಕ ಮತ್ತು ಸಾಮಾಜಿಕ ಜನ ಗಣತಿ ಕೊನೆಯ ಬಾರಿಗೆ ಆಗಿದ್ದು 1931ರಲ್ಲಿ. ಬಳಿಕ ವಿಶ್ವ ಯುದ್ಧ ಆಗಿದ್ದರಿಂದ ಜನ ಗಣತಿ ನಡೆಯಲಿಲ್ಲ. ಹೀಗಾಗಿ ಆರ್ಥಿಕ ಮತ್ತು ಸಾಮಾಜಿಕ ಆಧಾರದ ಮೇಲೆಯೂ ಗಣತಿ ನಡೆಯಲಿಲ್ಲ. ಮೀಸಲು ವಿಚಾರದಲ್ಲಿ ವಿಚಾರಣೆಗಳು ನಡೆದಾಗ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‍ಗಳು ಜಾತಿ ಮತ್ತು ಜನಗಣತಿ ಬಗ್ಗೆ ವರದಿ ಹಾಗೂ ದಾಖಲೆಗಳನ್ನು ಕೇಳುತ್ತಿದ್ದವು.
ಜಾಹೀರಾತು
ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ನಮ್ಮ ಸರ್ಕಾರ ಗಣತಿ ನಡೆಸುವ ಜವಾಬ್ದಾರಿ ವಹಿಸಿತು. ಆಗ ಹಿರಿಯ ನ್ಯಾಯವಾದಿ ಕಾಂತರಾಜ್ ಅವರು ಆಯೋಗದ ಅಧ್ಯಕ್ಷರಾಗಿದ್ದು. ಆಯೋಗ ಸುಮಾರು 1.88 ಲಕ್ಷ ಸಿಬ್ಬಂದಿಯನ್ನು ಗಣತಿಗೆ ಬಳಸಿಕೊಂಡಿತ್ತು. ಸಿಬ್ಬಂದಿ ನಗರ ಹಾಗೂ ಗ್ರಾಮೀಣ ಪ್ರದೇಶದ ಮನೆ ಮನೆಗೆ ಭೇಟಿ ನೀಡಿ, 55 ಅಂಶಗಳನ್ನು ಮುಂದಿಟ್ಟುಕೊಂಡು ಮಾಹಿತಿ ಸಂಗ್ರಹಿಸಿದ್ದರು. ಇದರ ಆಧಾರದ ಮೇಲೆ ಆಯೋಗ ಸಮಗ್ರವಾದ ವರದಿಯನ್ನು ಆಯೋಗ ಸಿದ್ಧಪಡಿಸಿದೆ. ದೇಶದಲ್ಲಿ ಎಲ್ಲಿಯೂ ಈ ರೀತಿಯ ವರದಿಯನ್ನು ಸಿದ್ಧಪಡಿಸಿಲ್ಲ. ಇದಕ್ಕಾಗಿ 162.77 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿತ್ತು.
ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಜನಸಂಖ್ಯೆ ಶೇ. 17.15, ಪರಿಶಿಷ್ಟ ಪಂಗಡದ ಜನಸಂಖ್ಯೆ ಶೇ. 6.95 ಇದೆ. ಒಟ್ಟು ಶೇ. 24.1ರಷ್ಟು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿದ್ದಾರೆ. ಎಲ್ಲ ಜಾತಿಗಳ ಬಗ್ಗೆ ಮಾಹಿತಿ ಇದ್ದರೆ ಈ ರೀತಿಯ ಕಾರ್ಯಕ್ರಮ ಜಾರಿಗೆ ತರಲು ಅನುಕೂಲವಾಗುತ್ತದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?