Uncategorized
ಸಾಧ್ವಿ ಪ್ರಜ್ಞಾಗೆ ಲೋಕಸಭೆ ಟಿಕೆಟ್ ಡೌಟ್! ಭೋಪಾಲ್‌ಗೆ ಬಿಜೆಪಿಯಿಂದ ಯಾರು ಗೊತ್ತಾ?
ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಬಿಜೆಪಿ ಸಖತ್ ಆಕ್ಟಿವ್ ಆಗಿದೆ, ಭಾರೀ ಬದಲಾವಣೆಗೆ ಬಿಜೆಪಿ ಮುಂದಾಗಿದ್ದು, ಹಿಂದುತ್ವ ಸಂಘಟನೆಗಳ ಪಾಲಿನ ಸಿಂಹಿಣಿ , ಭೋಪಾಲ್ ಹಾಲಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಅವರಿಗೆ ಟಿಕೆಟ್ ನೀಡದೆ ಇರಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಬಿಜೆಪಿಯ ಉನ್ನತ ಮೂಲಗಳಿಂದ ತಿಳಿದು ಬಂದಿದೆ. 2024ರ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು , ಇನ್ನೇನು ಕೆಲವೇ ವಾರಗಳಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಲಿದೆ.
ಈಗಾಗ್ಲೇ ಬಹುತೇಕ ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರ ಕಾರ್ಯವನ್ನು ಪ್ರಾರಂಭಿಸಿದೆ. ಈ ಬಾರಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ತನ್ನ ಕೆಲ ಅಭ್ಯರ್ಥಿಗಳನ್ನ ಬದಲಾಯಿಸುವ ಯೋಚನೆ ಮಾಡಿದೆ.
ಈ ಹಿನ್ನೆಲೆ ಮಧ್ಯಪ್ರದೇಶದಲ್ಲಿ ಭಾರೀ ಬದಲಾವಣೆಗೆ ಬಿಜೆಪಿ ಮುಂದಾಗಿದ್ದು, ಹಿಂದುತ್ವದ ಫೈರ್ ಬ್ರ್ಯಾಂಡ್, ಭೋಪಾಲ್ ಹಾಲಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಬದಲಾಯಿಸಲು ಚಿಂತನೆ ನಡೆದಿದೆ. ಸದ್ಯ ಭೋಪಾಲ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪ್ರಜ್ಞಾ ಠಾಕೂರ್ ಅವರನ್ನು ಈ ಬಾರಿ ಕೈ ಬಿಟ್ಟು ಆ ಕ್ಷೇತ್ರಕ್ಕೆ ಹೊಸ ಮುಖವನ್ನ ಕಣಕ್ಕಿಳಿಸಲು ಪಕ್ಷ ಮುಂದಾಗಿದೆ.
ಭೋಪಾಲ್ ಕ್ಷೇತ್ರಕ್ಕೆ ಹೊಸ ಮುಖ ಯಾರು?
ಭೋಪಾಲ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಹಾಲಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನ ಬದಲಾಯಿಸಿ ಆ ಜಾಗಕ್ಕೆ ಬರುವ ಹೊಸ ಮುಖಗಳ ಪೈಕಿ ಅನೇಕರು ಆಕಾಂಕ್ಷಿಗಳಿದ್ದು , ಪ್ರಜ್ಞಾ ಸಿಂಗ್ ಠಾಕೂರ್‌ಗೆ ಟಿಕೆಟ್ ಇಲ್ಲ ಎಂಬ ಸುದ್ದಿ ಹರಡುತ್ತಿದ್ದಂತೆ ಅನೇಕ ಮಂದಿ ಲೋಕಸಭಾ ಟಿಕೆಟ್‌ಗಾಗಿ ಟವೆಲ್ ಹಾಕಿದ್ದಾರೆ. ಆದರೆ ಬಿಜೆಪಿ ಇನ್ನೂ ಯಾರನ್ನೂ ಫೈನಲ್ ಮಾಡಿಲ್ಲ. ಮಧ್ಯಪ್ರದೇಶದ ಭೋಪಾಲ್ ಮಾತ್ರವಲ್ಲದೇ,ಅಲ್ಲಿನ ಅನೇಕ ಕ್ಷೇತ್ರಗಳ ಕೆಲ ಹಾಲಿಸಂಸದರಿಗೂ ಟಿಕೆಟ್ ನಿರಾಕರಿಸುವ ಸಂಭವವಿದೆ ಎಂದು ಹೇಳಲಾಗುತ್ತಿದೆ .
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?