Featured
ಗಂಗಾವತಿಯಲ್ಲಿ ಪುನೀತ್ ರಾಜಕುಮಾರ್ ಅಭಿನಯದ ‘ಜೇಮ್ಸ್’ ಚಿತ್ರೀಕರಣ

ರೈಸಿಂಗ್ ಕನ್ನಡ:
ಕೊಪ್ಪಳ:
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಜೆಮ್ಸ್’ ಸಿನಿಮಾ ಚಿತ್ರೀಕರಣ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಹೊರ ವಲಯದಲ್ಲಿ ನಡೆಯಿತು. ಚಿತ್ರದ ಫೈಟ್ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿದ್ದು, ಕಳೆದ ಒಂದು ವಾರದಿಂದ ಸಿದ್ಧತೆ ಮಾಡಿಕೊಳ್ಳಲಾಗಿತ್ತು.
ಈಗಾಗಲೆ ಹೊಸಪೇಟೆ ಸುತ್ತಲಿನ ಪರಿಸರದಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಹೊರ ವಲಯದಲ್ಲಿರುವ ಬಯಲು ಹಾಗೂ ಬೆಟ್ಟದ ಸುಂದರ ಪ್ರಾಕೃತಿಕ ಸ್ಥಳದಲ್ಲಿ ಸೆಟ್ ಹಾಕಲಾಗಿತ್ತು.
ಗಂಗಾವತಿಯಲ್ಲಿ ಜೇಮ್ಸ್ ಚಿತ್ರೀಕರಣ:
ಶೂಟಿಂಗ್ ಸೆಟ್ ವಿಡಿಯೋ ಈ ಮೊದಲು ಶೂಟಿಂಗ್ ಅ.21ಕ್ಕೆ ಎಂದು ನಿಗದಿ ಮಾಡಲಾಗಿತ್ತು. ಆದರೆ, ಅದಕ್ಕೂ ಮುನ್ನವೇ ಶೂಟಿಂಗ್ ಮಾಡಲಾಗಿದೆ. ಬೆಳಗ್ಗೆ ಹನ್ನೊಂದು ಗಂಟೆಗೆ ಆಗಮಿಸಿದ ಪುನೀತ್, ಕೆಲ ತಾಂತ್ರಿಕ ಸಮಸ್ಯೆಯಿಂದಾಗಿ ವಾಪಸ್ ಮರಳಿದರು. ಸಂಜೆ ಮತ್ತೆ ಶೂಟಿಂಗ್ ನಡೆಯಿತು.
ಚಿತ್ರೀಕರಣ ವೀಕ್ಷಿಸುವ ಉದ್ದೇಶಕ್ಕೆ ನಗರ ಸೇರಿದಂತೆ ಮಲ್ಲಾಪುರ ಗ್ರಾಮದ ಸುತ್ತಲಿನ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಆದರೆ, ಪೊಲೀಸರು ಮತ್ತು ಚಿತ್ರ ತಂಡದ ಬೌನ್ಸರ್ಗಳ ಕಾಟದಿಂದಾಗಿ ಸಾಕಷ್ಟು ದೂರದಿಂದಲೇ ಬೆಟ್ಟ ಹತ್ತಿ ಶೂಟಿಂಗ್ ವೀಕ್ಷಣೆ ಮಾಡಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?