ಟಾಪ್ ನ್ಯೂಸ್
ಯೋಜನೆಗಳನ್ನು ಜವಾಬ್ದಾರಿಯಿಂದ ಬಳಸಿಕೊಂಡಾಗ ಸಾರ್ಥಕ : ಸಚಿವ ಎಸ್.ಮಧು ಬಂಗಾರಪ್ಪ
![](https://risingkannada.com/wp-content/uploads/2024/01/WhatsApp-Image-2024-01-29-at-3.53.04-PM-scaled.jpeg)
ಶಿವಮೊಗ್ಗ : ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಹೀಗೆ ಬಳಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಿಸಲಾಗಿರುವ ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್ ಹಾಗೂ ಸಾರ್ವಜನಿಕ ಬೈಸಿಕಲ್ ಯೋಜನೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿ ಮಧು ಬಂಗಾರಪ್ಪ ಮಾತನಾಡಿದರು. ಜನರು ಕಟ್ಟುವ ಕಂದಾಯದ ಹಣದಿಂದಲೇ ನಿರ್ಮಾಣವಾಗಿರುವ ಸ್ಮಾರ್ಟ್ ಸಿಟಿ ಯೋಜನೆಗಳ ಜವಾಬ್ದಾರಿ ನಮ್ಮೆಲ್ಲರ ಮೇಲೆ ಹಾಗೂ ಸಾರ್ವಜನಿಕರ ಮೇಲಿದೆ. ಈ ಯೋಜನೆಯ ಉಪಯೋಗವನ್ನು ಎಲ್ಲರೂ ಪಡೆಯಬೇಕು. ಸಾರ್ವಜನಿಕರು ತುಂಗಾ ನದಿ ಉದ್ಯಾನವನದಲ್ಲಿ ಓಡಾಡಬೇಕು. ಆಗ ಮಾತ್ರ ಉದ್ಯಾನವನ ನಿರ್ಮಾಣ ಸಾರ್ಥಕವಾಗುತ್ತದೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಶೇ.50:50 ಅನುದಾನದಲ್ಲಿ ಕೆಲಸಗಳು ನಡೆದಿದ್ದು, ತುಂಗಾ ರಿವರ್ ಫ್ರಂಟ್ ಪ್ರಾಜೆಕ್ಟ್ ಅನ್ನು ರೂ.103 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಸಾರ್ವಜನಿಕರು ಈ ಯೋಜನೆಗಳನ್ನು ತಮ್ಮ ಆಸ್ತಿ ಎಂದು ಅರಿತು ಸ್ವಚ್ಚತೆ ಹಾಗೂ ಕಾಳಜಿಯಿಂದ ನೋಡಿಕೊಳ್ಳಬೇಕು. ಉದ್ಯಾನವನದಲ್ಲಿ ಮಹಿಳೆಯರು, ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ರಕ್ಷಣಾ ವ್ಯವಸ್ಥೆ, ಸಿಸಿಟಿವಿ ಅವಳವಡಿಸುವುದು, ರಾತ್ರಿ ವೇಳೆ ವಿದ್ಯುತ್ ದ್ವೀಪ ಸೇರಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ನೊಡಿಕೊಳ್ಳಬೇಕು ಎಂದರು.
ಉದ್ಯಾನವನ ನಿರ್ವಹಣೆಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಪ್ರವೇಶ ಶುಲ್ಕ ತೆಗೆದುಕೊಳ್ಳುವ ಬಗ್ಗೆ ಸ್ಮಾರ್ಟ್ ಸಿಟಿ ಎಂಡಿ ಯವರು ನಿರ್ಧರಿಸುವರು. ಇಲ್ಲಿ ಹಸಿರು, ಸ್ವಚ್ಚತೆ, ಭದ್ರತೆಗೆ ಹೆಚ್ಚಿನ ಪ್ರಾಮುಖ್ಯತೆ ನಿಡಬೇಕು. ಅಂಗಡಿ, ಜಾಹೀರಾತು, ಮಳಿಗೆಗಳಿಗೆ ಅವಕಾಶ ನೀಡಿ ಪ್ರವಾಸೋದ್ಯಮವನ್ನು ಉತ್ತೇಜಿಸಬೇಕು. ಹಾಗೂ ಉತ್ತಮವಾಗಿ ನಿರ್ವಹಣೆ ಮಾಡಬೇಕೆಂದು ಹೇಳಿದರು.
ನಗರದ ಹೃದಯ ಭಾಗ ಶಿವಪ್ಪ ನಾಯಕ ವೃತ್ತದಲ್ಲಿ ಪಾಲಿಕೆಗೆ ಹೊಂದಿಕೊಂಡಂತೆ ಹೂವು ಹಣ್ಣು ಮಾಕುಟ್ಟೆಗಾಗಿ 118 ಮಳಿಗೆ, ಮಲ್ಟಿಲೆವೆಲ್ ಕಾರ್ ಪಾರ್ಕಿಂಗ್‍ಗೆ ಒಟ್ಟು 172 ಕಾರು ಮತ್ತು 78 ಬೈಕ್ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಶಾಸಕರಾದ ಎಸ್ ಎನ್ ಚನ್ನಬಸಪ್ಪ, ಮಾಜಿ ವಿಧಾನಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಮಹಾನಗರಪಾಲಿಕೆ ಮಾಜಿ ಸದಸ್ಯ ಯೋಗೇಶ್, ಗನ್ನಿ ಶಂಕರ್, ಧೀರರಾಜ್ ಹೊನ್ನವಿಲೆ, ಶಬನಾ ಖಾನಂ, ಸ್ವತಂತ್ರ ನಿರ್ದೇಶಕಿ ಲಕ್ಷ್ಮಿ ಗೋಪಿನಾಥ್, ಸ್ಮಾರ್ಟ್ ಸಿಟಿ ಎಂಡಿ ಕೆ. ಮಾಯಾಣ್ಣಗೌಡ, ಮುಖ್ಯಇಂಜನಿಯರ್ ರಂಗನಾಥ ಮತ್ತು ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?