Featured
ಪ್ರಕೃತಿಯ ಮಡಿಲು ಕೊಟ್ಟಿಗೆಹಾರದಲ್ಲಿ ‘ಕಸ್ತೂರಿ ಮಹಲ್’ ಭರ್ಜರಿ ಶೂಟಿಂಗ್
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರ.
ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ.
ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಶಾನ್ವಿ ಶ್ರೀವಾಸ್ತವ್, ಸ್ಕಂಧ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್ ಮುಂತಾದ ಕಲಾವಿದರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶಿಸುತ್ತಿದ್ದಾರೆ. ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ.
ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ
ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ.ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಸೌಂದರ್ ರಾಜ್ ಅವರ ಸಂಕಲನ ಕಸ್ತೂರಿ ಮಹಲ್ ಚಿತ್ರಕ್ಕಿದೆ.
ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂಧ
ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ನೀನಾಸಂ ಅಶ್ವಥ್, ಅಕ್ಷರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?