Featured
ವಿಜಯಪುರದಲ್ಲಿ ಶಾರ್ಟ್ ಸರ್ಕ್ಯೂಟ್: ಹೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ರೈಸಿಂಗ್ ಕನ್ನಡ :
ವಿಜಯಪುರ :
ಶಾರ್ಟ್ ಸರ್ಕ್ಯೂಟ್ ನಿಂದ ಟ್ರಾನ್ಸ್ ಫಾರ್ಮರ್ಗೆ ಬೆಂಕಿ ತಗುಲಿದ ಪರಿಣಾಮ ಸ್ಫೋಟವಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಹತ್ತಿರದ ಟಿಸಿಯಲ್ಲಿ ಮೊದಲು ಬೆಂಕಿ ಹತ್ತಿಕೊಂಡಿದೆ. ಅದರ ದೃಶ್ಯಗಳನ್ನು ಸ್ಥಳೀಯರು ಸೆರೆ ಹಿಡಿಯಲು ಮುಂದಾಗಿದ್ದಾರೆ.
ಆಗ ಏಕಾಏಕಿ ಹೊತ್ತಿ ಉರಿಯುತ್ತಿದ್ದ ಟಿಸಿ ಸ್ಪೋಟಗೊಂಡಿದೆ. ಇದರಿಂದ ಸ್ಥಳೀಯರು ಕಕ್ಕಾಬಿಕ್ಕಿಯಾಗಿ ಓಡಿದ್ದಾರೆ.
ಈ ಘಟನೆಯಿಂದ ಗ್ರಾಮಸ್ಥರಲ್ಲಿ ಕೆಲ ಹೊತ್ತು ಭಯದ ವಾತಾವರಣ ಸೃಷ್ಟಿಯಾಗಿತ್ತು. ಟಿಸಿ ಬೇರೆಡೆಗೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದರು ಹೆಸ್ಕಾಂ ಅಧಿಕಾರಿಗಳು ಎಚ್ಚೆತ್ತುಕೊಂಡಿರಲಿಲ್ಲವಂತೆ. ಹೀಗಾಗಿ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?