Featured
ಕೊರೊನಾದಿಂದ ಭಗವಂತನೇ ಕಾಪಾಡಬೇಕು..! ಜವಾಬ್ದಾರಿಯಿಂದ ಹಿಂದೆ ಸರಿದ್ರಾ ಆರೋಗ್ಯ ಸಚಿವರು..?
![](https://risingkannada.com/wp-content/uploads/2020/07/WhatsApp-Image-2020-07-15-at-4.42.02-PM-1.jpeg)
ರೈಸಿಂಗ್ ಕನ್ನಡ :
ಚಿತ್ರದುರ್ಗ :
ಮುಂದಿನ ಎರಡು ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೇವರೇ ನಮ್ಮನ್ನು ಕಾಪಾಡಬೇಕು ಎಂದು ಸರ್ಕಾರದ ಕರ್ತವ್ಯವನ್ನ ದೇವಹ ಹೆಗಲಿಗೆ ಹೊರಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ವಿಶ್ವದಲ್ಲೇ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ, ನಮ್ಮಲ್ಲೂ ಕೂಡ ಮುಂದಿನ ಎರಡು ತಿಂಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿದರು. ಸೋಂಕು ಹೆಚ್ಚಲು ಸರ್ಕಾರದ ನಿರ್ಲಕ್ಷ್ಯವೇ ಕಾರಣ, ಸಚಿವರ ಹೊಂದಾಣಿಕೆಯ ಕೊರತೆಯೇ ಕಾರಣ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ, ಈ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾದ ಮಾತು ಎಂದು ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ಇವತ್ತು ಕೊರೊನಾ ನಿಯಂತ್ರಣ ಯಾರ ಕೈಯಲ್ಲಿದೆ ಹೇಳಿ? ದೇವರೇ ನಮ್ಮನ್ನು ಕಾಪಾಡಬೇಕು, ಕಾಂಗ್ರೆಸ್‌ನವರು ಇಂತಹ ಸಮಯದಲ್ಲಿ ರಾಜಕಾರಣ ಮಾಡಬಾರದು, ಅವರಿಗೆ ಶೋಭೆ ತರುವುದಿಲ್ಲ, ನಾವೇನಾದರೂ ತಪ್ಪು ಮಾಡಿದ್ದರೆ ಪ್ರಾಯಶ್ಚಿತ್ತ ನಿಭಾಯಿಸಲು ಸಿದ್ದರಿದ್ದೇವೆ ಎಂದಿದ್ದಾರೆ ಸಚಿವ ಶ್ರೀರಾಮುಲು.
ಆ ಮೂಲಕ ಇನ್ನೆರಡು ತಿಂಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಆರೋಗ್ಯ ಸಚಿವರು, ಕೊರೊನಾ ನಿಯಂತ್ರಣ ನಮ್ಮಿಂದ ಸಾಧ್ಯವಿಲ್ಲ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡು ಜವಬ್ದಾರಿಯನ್ನು ಕೈಚೆಲ್ಲಿದ್ದಾರೆ..
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?