Featured
JDS ಜೊತೆಗಿನ ಮೈತ್ರಿಯೇ ಸೋಲಿಗೆ ಕಾರಣ – ಟ್ವಿಟ್ಟರ್ನಲ್ಲಿ ಮಾಜಿ ಸಿಎಂ ತಿರುಗುಬಾಣ
![Siddaramaaih](https://risingkannada.com/wp-content/uploads/2020/07/Siddu2.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯ ಕಾಂಗ್ರೆಸ್ಗೆ ಹೊಸ ನಾಯಕನಾಗಿ ಡಿ.ಕೆ,ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಆದ್ರೆ ಪಕ್ಷದೊಳಗೆ ಯಾವುದೂ ಸರಿ ಇಲ್ಲ ಅನ್ನುವುದು ಪದೇ ಪದೇ ಹೊರಗೆ ಬರುತ್ತಿದೆ. ಡಿ.ಕೆ.ಶಿವಕುಮಾರ್ ಜೆಡಿಎಸ್ ಮೈತ್ರಿ ಬಗ್ಗೆ ಸಾಫ್ಟ್ ಕಾರ್ನರ್ ತಳೆದಿದ್ದರೆ, ಕಾಂಗ್ರೆಸ್ನ ಪ್ರಭಾವಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಹಿರಂಗವಾಗಿಯೇ ಜೆಡಿಎಸ್ ವಿರುದ್ಧ ತಿರುಗಿಬಿದ್ದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಪ್ರದರ್ಶನಕ್ಕೆ ಜೆಡಿಎಸ್ ಜೊತೆಗಿನ ಮೈತ್ರಿಯೇ ಕಾರಣವೆಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ. ಜೆಡಿಎಸ್ ಜೊತೆಗೆ ಹೆಜ್ಜೆ ಇಟ್ಟು ಕಾಂಗ್ರೆಸ್ ಅತೀ ದೊಡ್ಡ ತಪ್ಪು ಮಾಡಿತು ಎಂದು ಸಿದ್ಧು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಚುನಾವಣಾಪೂರ್ವ ಮೈತ್ರಿ ಬೇಡ ಎಂದು ನಾನೂ ಹೇಳಿದ್ದೆ. ಇದರಿಂದ ನಿರೀಕ್ಷಿಸಿದ ಹಾಗೆ ಮತ ಧ್ರುವೀಕರಣ ಆಗುವುದಿಲ್ಲ ಎಂಬುದು ನನ್ನ ಲೆಕ್ಕಾಚಾರವಾಗಿತ್ತು. ಮೈತ್ರಿ ಮಾಡಿಕೊಳ್ಳದೆ ಇದ್ದಿದ್ದರೆ ಕನಿಷ್ಠ 7-8 ಸ್ಥಾನಗಳನ್ನು ಗೆಲ್ಲುತ್ತಿದ್ದೆವು. 5/5#COVID19karnataka— Siddaramaiah (@siddaramaiah) July 8, 2020
ಲೋಕಸಭಾ ಚುನಾವಣೆಯ ವೇಳೆ ಮೈತ್ರಿ ಬೇಡ ಎಂದು ಸಿದ್ದು ಮೊದಲೇ ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದರಂತೆ. ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಅಂದುಕೊಂಡಂತೆ ಮತ ಧ್ರುವೀಕರಣ ಅಸಾಧ್ಯ ಎಂದು ಹೇಳಿದ್ದೆ. ಆದರೆ ಅನಿವಾರ್ಯವಾಗಿ ಮೈತ್ರಿ ಮಾಡಿಕೊಂಡಿದ್ದೆವು. ಮೈತ್ರಿ ಇಲ್ಲದೇ ಇದ್ದಿದ್ದರೆ ಕನಿಷ್ಟ 7ರಿಂದ 8 ಸ್ಥಾನಗಳನ್ನು ಗೆಲ್ಲುತ್ತಿದ್ದೆವು ಎಂದು ಸಿದ್ಧು ಹೇಳುವ ಮೂಲಕ ಜೆಡಿಎಸ್ಗೆ ಬಿಸಿ ಮುಟ್ಟಿಸಿದ್ದಾರೆ.
![](https://risingkannada.com/wp-content/uploads/2020/07/FULL-PLATE-10-1024x576.png)
ಸದ್ಯ ಕಾಂಗ್ರೆಸ್ನಲ್ಲಿ ಎರಡು ಬಣ ಇದೆ ಎಂದು ಹೇಳಲಾಗುತ್ತಿದೆ. ಪ್ರಭಾವಿ ಮತ್ತು ಮಾಜಿ ಸಿಎಂ ಆಗಿರುವ ಸಿದ್ಧರಾಮಯ್ಯ ಜೆಡಿಎಸ್ ಅನ್ನು ದೂರ ಇಡುವ ಪ್ರಯತ್ನದಲ್ಲಿದ್ದಾರೆ. ಮತ್ತೊಂದು ಕಡೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ಇದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಲ್ಲಿ ಡಿಕೆಶಿ ಮತ್ತು ಮಾಜಿ ಮುಖ್ಯಮಂತ್ತಿ ಹೆಚ್.ಡಿ.ಕುಮಾರ್ ಸ್ವಾಮಿ ಜೋಡೆತ್ತುಗಳೆಂದು ಘೋಷಿಸಿಕೊಂಡಿದ್ದರು. ಆದರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಎದುರು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದು ಇತಿಹಾಸ ಸೃಷ್ಟಿಸಿದ್ರೆ, ಜೆಡಿಎಸ್ ಹಾಸನ ಮತ್ತು ಕಾಂಗ್ರೆಸ್ ಬೆಂಗಳೂರು ಗ್ರಾಮಾಂತ್ರ ಕ್ಷೇತ್ರವನ್ನು ಮಾತ್ರ ಗೆದ್ದುಕೊಂಡಿತ್ತು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜಯಭೇರಿ ಬಾರಿಸಿ ಲೋಕಸಭೆ ಪ್ರವೇಶಿಸಿದ್ದರು. ಲೋಕಸಭಾ ಚುನಾವಣೆಯ ನಂತರ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿತ್ತು.
![](https://risingkannada.com/wp-content/uploads/2020/04/RISING-KANNADA-logo-150px.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?