Featured
ಹಾಡು ನಿಲ್ಲಿಸಿದ ಗಾನ ಕೋಗಿಲೆ ಎಸ್ಪಿ ಬಾಲಸುಬ್ರಹ್ಮಣ್ಯಂ: ಮಧ್ಯಾಹ್ನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರು

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಗಾನ ಗಂಧರ್ವ ಎಸ್ಪಿ ಬಾಲಸುಬ್ರಹ್ಮಣ್ಯಂ(74) ಕೊನೆಯುಸಿರೆಳೆದಿದ್ದಾರೆ ಎಂದು ಪುತ್ರ ಎಸ್ಪಿ ಚರಣ್ ಮಾಹಿತಿ ನೀಡಿದ್ದಾರೆ.
ಶುಕ್ರವಾರ 1 ಗಂಟೆ 4 ನಿಮಿಷಕ್ಕೆ ಎಸ್ಪಿ ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಪುತ್ರ ಚರಣ್ ಹೇಳಿದ್ದಾರೆ.
ಅಭಿಮಾನಿಗಳು ಇರುವವರೆಗೂ ನನ್ನ ತಂದೆ ಅಮರವಾಗಿರುತ್ತಾರೆ. ಅವರಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಪಾರ್ಥೀವ ಶರೀರವನ್ನ ಸಾರ್ವಜನಿಕ ದರ್ಶನಕ್ಕೆ ನಟ ಕಮಲ್ಹಾಸನ್ ಕೇಳಿಕೊಂಡಿದ್ದಾರೆ. ಎಸ್ಪಿಬಿ ಅವರಿಗೆ ಕೊರೊನಾ ಪರೀಕ್ಷೆ ನಡೆಸಿದ ನಂತರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಸಿಗಲಿದೆ.
1946ರಲ್ಲಿ ಜೂನ್ 4ರಂದು ಜನಿಸಿದ್ದ ಎಸ್ಪಿಬಿ ತೆಲುಗು, ಕನ್ನಡ, ತಮಿಳು, ಹಿಂದಿ ,ಮಲಯಾಳಂ ಸೇರಿದಂತೆ ಭಾರತದ ಬಹುತೇಕ ಎಲ್ಲಾ ಭಾಷೆಗಳಲ್ಲಿ ಹಾಡಿದ್ದಾರೆ. ಸುಮಾರು 16 ಭಾಷೆಗಳಲ್ಲಿ ಹಾಡಿ 40 ಸಾವಿರಕ್ಕೂ ಹೆಚ್ಚು ಹಾಡನ್ನ ಹಾಡಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















