Featured
ಚೆನ್ನೈ ಎಂಜಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ: ಎಸ್ಪಿಗೆ ಕೊರೊನಾ ನೆಗೆಟಿವ್
ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಚೆನ್ನೈ ಎಂಜಿಎಂ ಆಸ್ಪತ್ರೆಯಿಂದ ಕೊರೊನಾ ಹೆಲ್ತ್ ಬುಲೆಟಿನ್ಬಿಡುಗಡೆಯಾಗಿದ್ದು ಎಸ್ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ನೆಗೆಟಿವ್ ಎಂದು ವರದಿಯಾಗಿದೆ.
ಮಧ್ಯಾಹ್ನ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಗಾನ ಕೋಗಿಲೆ ಎಸ್ಪಿ ಬಾಲಸುಬ್ರಹ್ಮಣ್ಯಂ ಅಪಾರ ಅಭಿಮಾನಿಗಳನ್ನ ಅಗಲಿದ್ದಾರೆ.
ಸಾರ್ವಜನಿಕ ದರ್ಶನಕ್ಕೆ ಕೊಡುವ ಮುನ್ನ ಎಸ್ಪಿ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಅವರ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕೆಂದು ಖ್ಯಾತ ನಟ ಕಮಲ್ಹಾಸನ್ ಕೇಳಿಕೊಂಡಿದ್ದರು.
ಗಾನ ಗಂಧರ್ವನಿಗೆ ಕೊನೆಯ ಬೀಳ್ಕೊಡುಗೆ ಕೊಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ಎಸ್ಪಿ ಬಾಲ ಸುಬ್ರಹ್ಮಣ್ಯಂ ಪಾರ್ಥಿವ ಶರೀರವನ್ನ ಚೆನ್ನೈನ ನುಂಗಂಬಾಕಂನಲ್ಲಿರುವ ಮನೆಗೆ ಸ್ಥಳಾಂತರ ಮಾಡಲಿದ್ದಾರೆ.
ಎಸ್ಪಿಬಿ ಅವರ ಅಂತ್ಯಕ್ರಿಯೆ ಬಗ್ಗೆ ಅವರ ಕುಟುಂಬ ನಿರ್ಧರಿಸಲಿದ್ದು ಶುಕ್ರವಾರ ರಾತ್ರಿ ಅಥವಾ ಶನಿವಾರ ಬೆಳಗ್ಗೆ ನಡೆಯಲಿದೆ ಎಂದು ತಿಳಿದು ಬಂದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?